ರಾಹುಲ್ ಗಾಂಧಿ 
ದೇಶ

ಒಆರ್ ಒಪಿ ಆತ್ಮಹತ್ಯೆ: ಆರ್ ಎಂಎಲ್ ಆಸ್ಪತ್ರೆ ಬಳಿ ರಾಹುಲ್ ಗೆ ತಡೆ

ಒಆರ್ ಒಪಿ ಸಂಬಂಧಿ ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಸೈನಿಕ ರಾಮ್ ಕಿಶನ್ ಗರೇವಾಲ್ ಅವರ ಕುಟುಂಬವನ್ನು ಭೇಟಿ ಮಾಡಲು ಆರ್...

ನವದೆಹಲಿ: ಒಆರ್ ಒಪಿ ಸಂಬಂಧಿ ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಸೈನಿಕ ರಾಮ್ ಕಿಶನ್ ಗರೇವಾಲ್ ಅವರ ಕುಟುಂಬವನ್ನು ಭೇಟಿ ಮಾಡಲು ಆರ್ ಎಂಎಲ್ ಆಸ್ಪತ್ರೆ ಆಗಮಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಸ್ಪತ್ರೆಯ ಗೇಟ್ ಬಳಿಯೇ ತಡೆಯಲಾಗಿದ್ದು, ಕುಟುಂಬದ ಭೇಟಿಗೂ ಅವಕಾಶ ನೀಡಿಲ್ಲ.
ಆಸ್ಪತ್ರೆ ಆವರಣ ಪ್ರವೇಶಿಸುವುದಕ್ಕೆ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಒಂದು ಗೇಟಿನಿಂದ ಮತ್ತೊಂದು ಗೇಟ್ ಬಳಿ ತೆರಳಿದ ಘಟನೆಯೂ ನಡಿಯಿತು.
ಈ ವೇಳೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಉಪಾಧ್ಯಕ್ಷ, ದೇಶದಲ್ಲಿ ಎಂತಹ ಪರಿಸ್ಥಿತಿ ನಿರ್ಮಾಣವಾಗಿದೆ ನೋಡಿ. ನಮ್ಮ ಸೈನಿಕನ ಕುಟುಂಬದ ಭೇಟಿಗೆ ಅವಕಾಶ ನೀಡದಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು ಎಂದರು.
ಇದೊಂದು ರೀತಿಯ ಮನಸ್ಥಿತಿ, ಒಂದು ನಿರ್ಧಿಷ್ಟ ಮತ್ತು ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಇದಕ್ಕೆ ನಾನು ಪರಿಹಾರ ಕಂಡುಕೊಂಡಿದ್ದು, ಮೃತ ಮಾಜಿ ಸೈನಿಕನ ಕುಟುಂಬ ಆಸ್ಪತ್ರೆಯಿಂದ ಹೊರಬಂದು ತಮ್ಮನ್ನು ಭೇಟಿ ಮಾಡಲಿದೆ ಎಂದರು.
ಇದಕ್ಕೂ ಮುನ್ನ ಗರೆವಾಲ್ ಅವರ ಕುಟುಂಬವನ್ನು ಭೇಟಿ ಮಾಡಲು ಬಂದ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಬೇಸತ್ತು ರಾಮ್ ಕಿಶನ್ ಗರೇವಾಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!