ಸಾಂದರ್ಭಿಕ ಚಿತ್ರ 
ದೇಶ

ಭಾರತ ತೊರೆದ ಪಾಕ್ ರಾಯಭಾರ ಕಚೇರಿಯ ಆರು ಅಧಿಕಾರಿಗಳು

ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿ ಬೇಹುಗಾರಿಕೆ ಸುಳಿಯಲ್ಲಿ ಸಿಲುಕಿದ ನಂತರ ಉಭಯ ದೇಶಗಳ ನಡುವೆ...

ನವದೆಹಲಿ: ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿ ಬೇಹುಗಾರಿಕೆ ಸುಳಿಯಲ್ಲಿ ಸಿಲುಕಿದ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ದೆಹಲಿಯಲ್ಲಿರುವ ಪಾಕ್ ರಾಯಭಾರ ಕಚೇರಿಯ ಆರು ಅಧಿಕಾರಿಗಳು ಬುಧವಾರ ಭಾರತ ಬಿಟ್ಟು ಸ್ವದೇಶಕ್ಕೆ ಮರಳಿದ್ದಾರೆ.
ಒಟ್ಟು ಎಷ್ಟು ಅಧಿಕಾರಿಗಳು ಭಾರತ ತೊರೆದಿದ್ದಾರೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಆದರೆ ಪಾಕ್ ಹೈಕಮಿಷನ್ ಮೂಲಗಳ ಪ್ರಕಾರ, ಆರು ಅಧಿಕಾರಿಗಳು ದೆಹಲಿಯಿಂದ ಸ್ವದೇಶಕ್ಕೆ ಮರಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದ ಅಧಿಕಾರಿಗಳು ನಮಗೆ ಬೆದರಿಕೆ ಹಾಕುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಭಾರತದಲ್ಲಿದ್ದು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ,
ಪಾಕ್ ರಾಯಭಾರ ಕಚೇರಿಯ ವಾಣಿಜ್ಯ ಕೌನ್ಸಿಲರ್ ಸೈಯಿದ್ ಫಾರುಖ್ ಹಬಿಬ್ ಮತ್ತು ಕಾರ್ಯದರ್ಶಿಗಳಾದ ಖಾದಿಮ್ ಹುಸೇನ್, ಮುದಸ್ಸಿರ್ ಚೀಮಾ ಹಾಗೂ ಶಾಹೀದ್ ಇಖ್ಬಾಲ್ ಅವರು ಪಾಕಿಸ್ತಾನಕ್ಕೆ ಮರಳಿದ್ದಾರೆ ಎನ್ನಲಾಗಿದೆ.
ಬೇಹುಗಾರಿಕೆ ಆರೋಪದ ಮೇಲೆ ಪಾಕ್ ರಾಯಭಾರಿ ಕಚೇರಿಯ ಬಂಧಿತ ಮೊಹಮದ್‌ ಅಖ್ತರ್‌ ಉಚ್ಛಾಟನೆಗೊಂಡ ಬೆನ್ನಲ್ಲೇ ಪಾಕಿಸ್ತಾನ ಇನ್ನೂ ಆರು ಅಧಿಕಾರಿಗಳನ್ನು ಭಾರತದಿಂದ ವಾಪಸ್ ಕರೆಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!