ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 
ದೇಶ

ಆತ್ಮಹತ್ಯೆ ಮಾಡಿಕೊಂಡ ಯೋಧನಿಗೆ ಹುತಾತ್ಮ ಪಟ್ಟ ನೀಡಬಾರದು: ಮನೋಹರ್ ಖಟ್ಟರ್

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡುದ್ದು, ಆತ್ಮಹತ್ಮೆ ಮಾಡಿಕೊಂಡಿರುವ ಯೋಧನನ್ನು ಹುತಾತ್ಮ ಯೋಧನೆಂದು ಬಿಂಬಿಸಬಾರದು...

ಚಂಡೀಗಢ: ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡುದ್ದು, ಆತ್ಮಹತ್ಮೆ ಮಾಡಿಕೊಂಡಿರುವ ಯೋಧನನ್ನು ಹುತಾತ್ಮ ಯೋಧನೆಂದು ಬಿಂಬಿಸಬಾರದು ಎಂದು ಗುರುವಾರ ಹೇಳಿದ್ದಾರೆ.

ಹರ್ಯಾಣ ಮೂಲದ ನಿವೃತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದೇಶಕ್ಕಾಗಿ ಹೋರಾಡಿ ಮಣಿದ ಯೋಧರಿಗೆ ಹುತಾತ್ಮ ಯೋಧನ ಪಟ್ಟ ನೀಡಬೇಕೇ ವಿನಃ, ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಯೋಧನಿಗೆ ಹುತಾತ್ಮ ಪಟ್ಟವನ್ನು ನೀಡಬಾರದು ಎಂದು ಹೇಳಿದ್ದಾರೆ.

ಸಮಾನ ವೇತನ ಮತ್ತು ಸಮಾನ ಪಂಚಣಿಯನ್ನು ಜಾರಿಗೆ ತರುವಲ್ಲಿ ಈ ಹಿಂದಿದ್ದ ಸರ್ಕಾರ ವಿಫಲವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಆರ್ ಒಪಿಯನ್ನು ಜಾರಿಗೆ ತಂದಿದ್ದಾರೆ. ವೀರ ಯೋಧರಾರು ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರಕ್ಕೆ ಕೈ ಹಾಕುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಹಿಂದೆ ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರೂ ಕೂಡ ಇದೇ ರೀತಿಯ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ರಾಮ್ ಕಿಶನ್ ಅವರ ಆತ್ಮಹತ್ಯೆಗೆ ಒಆರ್ ಒಪಿ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಕಿಶನ್ ಅವರ ಮಾನಸಿಕ ಸ್ಥಿತಿ ಬಗ್ಗೆ ಸಂದೇಹಗಳಿದ್ದು, ಮಾನಸಿಕ ಸ್ಥಿತಿಯ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್