ಚಂಡಿಘಡ: ನರೇಂದ್ರ ಮೋದಿ ಸರ್ಕಾರ 1984 ರ ಸಿಖ್ ವಿರೋಧಿ ದಂಗೆಯ ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಎಚ್.ಎಸ್ ಫೂಲ್ಕಾ ಆರೋಪಿಸಿದ್ದಾರೆ.
1984 ರ ಸಿಖ್ ವಿರೋಧಿ ದಂಗೆಯ ಪ್ರಮುಖ ಆರೋಪಿಗಳಾದ ಜಗದೀಶ್ ಟೈಟ್ಲರ್ ಹಾಗೂ ಕಮಲ್ ನಾಥ್ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.
ಕಾಂಗ್ರೆಸ್ ಸರ್ಕಾರ ಮತ್ತು ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಒಂದೇ ರೀತಿಯಲ್ಲಿ ಆರೋಪಿಗಳನ್ನು ರಕ್ಷಿಸುತ್ತಿದೆಸ ಕಳೆದ ಎರಡು ವರ್ಷಗಳಿಂದ ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿರುವ ಸರ್ಕಾರ ತನಿಖೆ ನಡೆಸುವುದನ್ನು ವಿಳಂಬ ಮಾಡುತ್ತಿದೆ ಎಂದು ದೂರಿದ್ದಾರೆ.
ಪ್ರಕರಣದ ತನಿಖೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ 2015 ರ ಡಿಸೆಂಬರ್ ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಮೋದಿ ಸರ್ಕಾರ ಅವಧಿಗೂ ಮುನ್ನ ತನಿಖೆ ಮುಗಿಸದೇ ಮತ್ತೆ 4 ತಿಂಗಳು ಹೆಚ್ಚುವರಿ ಸಮಯಾವಕಾಶ ಕೋರಿದೆ, ಪಂಜಾಬ್ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಈ ರೀತಿ ಮಾಡುತ್ತಿದೆ ಎಂದು ಅವರು ಆಪಾದಿಸಿದ್ದಾರೆ.