ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ 
ದೇಶ

ರಾಹುಲ್ ಗಾಂಧಿ 'ಕಾಮಿಡ್ ಸರ್ಕಸ್' ಹೀರೋದಂತೆ ವರ್ತಿಸುತ್ತಿದ್ದಾರೆ: ಬಿಜೆಪಿ

ಮಾಜಿ ಯೋಧನ ಆತ್ಮಹತ್ಯೆ ಪ್ರಕರಣವನ್ನಿಡಿದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಕಾಮಿಡಿ ಸರ್ಕಸ್ ನ ಹೀರೋದಂತೆ ವರ್ತಿಸುತ್ತಿದ್ದಾರೆಂದು ಬಿಜೆಪಿ ಗುರುವಾರ ಹೇಳಿದ್ದಾರೆ...

ನವದೆಹಲಿ: ಮಾಜಿ ಯೋಧನ ಆತ್ಮಹತ್ಯೆ ಪ್ರಕರಣವನ್ನಿಡಿದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಕಾಮಿಡಿ ಸರ್ಕಸ್ ನ ಹೀರೋದಂತೆ ವರ್ತಿಸುತ್ತಿದ್ದಾರೆಂದು ಬಿಜೆಪಿ ಗುರುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಅವರು ಸಮಾನ ವೇತನ ಮತ್ತು ಸಮಾನ ಪಿಂಚಣಿಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದರು. ಆದರೂ, ಆವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲು ಯೋಧನ ಆತ್ಮಹತ್ಯೆಯ ಹಿಂದಿರುವ ಕಾರಣವನ್ನು ಕಂಡುಹಿಡಿಯಬೇಕಿದೆ ಎಂದು ಹೇಳಿದ್ದಾರೆ.

ಸಮಾನ ವೇತನ ಮತ್ತು ಸಮಾನ ಪಿಂಚಣಿ ಯೋಜನೆಗಾಗಿ ಸರ್ಕಾರ ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡುತ್ತಿದೆ. ಈ ಬಗ್ಗೆ ರಕ್ಷಣಾ ಸಚಿವರು ದಾಖಲೆಗಳನ್ನು ನೀಡಿದ್ದಾರೆ. ರಾಮ್ ಕಿಶನ್ ಅವರು ಯೋಜನೆಯ ಫಲವನ್ನು ಪಡೆದುಕೊಂಡಿದ್ದು, ಮೊದಲು ಆತ್ಮಹತ್ಯೆಯ ಹಿಂದಿನ ಸತ್ಯವನ್ನು ಕಂಡುಹಿಡಿಯಬೇಕಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚಸ್ಸಿನ ಕುರಿತಂತೆ ಕೆಲವರಿಗೆ ಸಮಸ್ಯೆಯುಂಟಾದಂತಿದೆ. ಹೀಗಾಗಿ ಅವರ ಗೌರವವನ್ನು ಹಾಳು ಮಾಡುವ ಸಲುವಾಗಿ ಈ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT