ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ 
ದೇಶ

ಟಾಟಾ ಇತಿಹಾಸದಲ್ಲೇ ರತನ್ ಟಾಟಾ ಅತ್ಯಂತ ಭ್ರಷ್ಟ ಅಧ್ಯಕ್ಷ: ಸುಬ್ರಮಣಿಯನ್ ಸ್ವಾಮಿ

ಟಾಟಾ ಸಮೂಹದ ಇತಿಹಾಸದಲ್ಲಿಯೇ ರತನ್ ಟಾಟಾ ಅವರು ಅತ್ಯಂತ ಭ್ರಷ್ಟ ಅಧ್ಯಕ್ಷರಾಗಿದ್ದಾರೆಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಗುರುವಾರ...

ರಾಯ್ಪುರ: ಟಾಟಾ ಸಮೂಹದ ಇತಿಹಾಸದಲ್ಲಿಯೇ ರತನ್ ಟಾಟಾ ಅವರು ಅತ್ಯಂತ ಭ್ರಷ್ಟ ಅಧ್ಯಕ್ಷರಾಗಿದ್ದಾರೆಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

ಈ ಕುರಿತಂತೆ ರಾಯ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಟಾಟಾ ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟ ಅಧ್ಯಕ್ಷನೆಂದರೆ ಅದು ರತನ್ ಟಾಟಾ. ನಿಜ ಹೇಳಬೇಕೆಂದರೆ ರತನ್ ಟಾಟಾ ಅವರು ಟಾಟಾಗೆ ಸೇರಿದವರಲ್ಲ. ರತನ್ ತಂದೆಯವರನ್ನು ದತ್ತು ಪಡೆದುಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.

ರತನ್ ಟಾಟಾ ಅವರು ಸೈರಸ್ ಮಿಸ್ಟ್ರಿ ಅವರಿಗೆ ಅನ್ಯಾಯವನ್ನು ಮಾಡುತ್ತಿದ್ದಾರೆ. ರತನ್ ಟಾಟಾ ಅವರು ಈ ಹಿಂದೆ 2ಜಿ -ಹಗರಣ, ಏರ್ ಏಷ್ಯಾ ಹಗರಣ, ವಿಸ್ತಾರಾ ಪಾಲುದಾರಿಕೆ ಜಾಗ್ವಾರ್ ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಎಲ್ಲಿ ತಾವು ಹಗರಣಗಳಲ್ಲಿ ಸಿಕ್ಕಿ ಹಾಕಿಕೊಂಡು ಬಿಡುತ್ತೇನೆಯೋ ಎಂಬ ಭಯದಿಂದ ಮಿಸ್ಟ್ರಿ ವಿರುದ್ಧ ಕ್ರಮ ತೆಗೆದುಕೊಂಡರು. ನ್ಯಾಯಾಲಯ ವಿಚಾರಣೆ ನಡೆಸಿದಾಗ ಟಾಟಾ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

ರತನ್ ಟಾಟಾ ಅವರು ನಡೆಸುತ್ತಿರುವ ಭ್ರಷ್ಟ್ರಾಚಾರ ಪ್ರಕರಣಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ನಡೆಸಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಬೇಕಿದೆ. ಈ ಬಗ್ಗೆ ಈಗಾಗಲೇ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದೇನೆ. ಪತ್ರದಲ್ಲಿ ರತನ್ ಟಾಟಾ ಅವರು ಭಾರತೀಯ ದಂಡ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದರ ಬಗ್ಗೆಯೂ ವಿವರವಾಗಿ ಹೇಳಿದ್ದೇನೆಂದು ಸುಬ್ರಮಣಿಯನ್ ಸ್ವಾಮಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್