ಲಖನೌ: ಉತ್ತರ ಪ್ರದೇಶ ಚುನಾವಣೆಯಲ್ಲಿ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುಳಿವು ನೀಡಿರುವ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಯಾದವ್ ಅವರು, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯಾತೀತ ಪಕ್ಷಗಳು ಒಂದಾಗಬೇಕು ಎಂದು ಗುರುವಾರ ಕರೆ ನೀಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿಕಾಸ ರಥ ಯಾತ್ರೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಪಾಲ್ ಯಾದವ್ ಅವರು, ಇತರೆ ಪಕ್ಷಗಳೊಂದಿಗೆ ಮೈತ್ರಿಯ ಕುರಿತು ರಾಷ್ಟ್ರೀಯ ನಾಯಕರು ಹಾಗೂ ಪಕ್ಷದ ಅಧ್ಯಕ್ಷರಾದ ಮುಲಾಯಂ ಸಿಂಗ್ ಯಾದವ್ ಅವರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ಆಂತರಿಕ ಕಲಹದಿಂದಾಗಿ ಇಂದಿನ ರಥ ಯಾತ್ರೆಯಲ್ಲಿ ಬಿಎಸ್ಪಿ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಅವರು ಭಾಗವಹಿಸುವ ಬಗ್ಗೆ ಅನುಮಾನವಿತ್ತು. ಆದರೆ ಶಿವಪಾಲ್ ಯಾದವ್ ಅವರು ಲಖನೌನ ಲಾ ಮಾರ್ಟಿನರಿ ಮೈದಾನಕ್ಕೆ ಆಗಮಿಸುವ ಮೂಲಕ ಸಮಾಜವಾದಿ ಪಕ್ಷದೊಳಗೆ ಒಗ್ಗಟ್ಟು ಇದೆ ಎಂದು ಸಾರಿದ್ದಾರೆ.
ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಪುತ್ರ ಅಖಿಲೇಶ್ ಯಾದವ್ ಅವರ ರಥ ಯಾತ್ರೆಗೆ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics