ವಿಕಾಸ ರಥ ಯಾತ್ರೆಗೆ ಬಳಸುವ ಬಸ್ಸು
ಲಕ್ನೋ: ತಮ್ಮ ರಾಜಕೀಯ ಉದ್ದೇಶದ ಬಹು ಪ್ರಚಾರದ ರಥ ಯಾತ್ರೆಗೆ ಚಾಲನೆ ಸಿಕ್ಕಿದ ನಂತರ ಮಾತನಾಡಿದ ಮುಖ್ಯಮಂತ್ರಿ ಅಖಿಲೇಶ್ ಯಾದವ್, ನಾನು ಈ ಐತಿಹಾಸಿಕ ದಿನಕ್ಕೆ ರಾಜ್ಯದ ಯುವ ಜನಾಂಗವನ್ನು ಅಭಿನಂದಿಸುತ್ತೇನೆ. ಉತ್ತರ ಪ್ರದೇಶದಲ್ಲಿ ಯಾತ್ರೆಯ ಪದ್ಧತಿಯನ್ನು ನಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಆರಂಭಿಸಿದರು. ಅದನ್ನು ತಾವು ಮುಂದುವರಿಸಿಕೊಂಡು ಹೋಗುತ್ತಿದ್ದೇನೆ. ಈ ಯಾತ್ರೆ ಮೂಲಕ ಸಮಾಜವಾದಿ ಪಕ್ಷಕ್ಕೆ ಮತ ಹಾಕಿ ಎಂದು ರಾಜ್ಯದ ಜನತೆಯಲ್ಲಿ ಕೇಳುತ್ತೇನೆ ಎಂದು ಹೇಳಿದರು.
ಯಾತ್ರೆ ಒಂದು ತಿಂಗಳು ತಡವಾಗಿ ಆರಂಭವಾಗಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಾವು ಅಕ್ಟೋಬರ್ 3ಕ್ಕೆ ಯಾತ್ರೆ ಆರಂಭಿಸಬೇಕಿತ್ತು. ಆದರೆ ಕೆಲವು ಕಾರಣಗಳಿಂದಾಗಿ ನಮಗೆ ಸಾಧ್ಯವಾಗಲಿಲ್ಲ. ಇದೀಗ ನಾವು ಯಾತ್ರೆ ಮೂಲಕ ರಾಜ್ಯದ ಹೆಚ್ಚು ಜನರನ್ನು ತಲುಪಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.
ತಮ್ಮ ಸರ್ಕಾರದ ಸಾಧನೆಗಳನ್ನು ಹೇಳಿ ಸಮಾನ ಅಭಿವೃದ್ಧಿ ಸಾಧಿಸಲು ಸಮಾಜವಾದಿ ಪಕ್ಷದ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಪ್ರಯತ್ನಿಸಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics