ದೇಶ

ನ್ಯಾಷನಲ್ ಹೆರಾಲ್ಜ್ ಪ್ರಕರಣ: ಡಿ.9ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

Manjula VN

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಳಿಬಂದಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಯನ್ನು ದೆಹಲಿ ಪಟಿಯಾಲ ಹೌಸ್ ನ್ಯಾಯಾಲಯವು ಡಿಸೆಂಬರ್ 9ಕ್ಕೆ ಮುಂದೂಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಕಂಪನಿಯ ಹಣವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಹೇಳಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅರೋಪಿಸಿದ್ದರು. ಅಲ್ಲದೆ,  2012ರಲ್ಲಿ ದೆಹಲಿಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ಪ್ರಕರಣ ದೇಶದಾದ್ಯಂತ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಕಳೆದ ಆಗಸ್ಟ್ ತಿಂಗಳಿನಲ್ಲಿ ನ್ಯಾಯಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನೋಟಿಸ್ ವೊಂದನ್ನು ಜಾರಿ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯ, ಆದಾಯ ತೆರಿಗೆ ಇಲಾಖೆ ಮತ್ತಿತರ ಸಂಸ್ಥೆಗಳು ದಾಖಲೆ ಪತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನೋಟಿಸ್ ನಲ್ಲಿ ತಿಳಿಸಿತ್ತು. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯವು ಡಿ.9ಕ್ಕೆ ವಿಚಾರಣೆ ಮುಂದೂಡಿರುವುದಾಗಿ ತಿಳಿದುಬಂದಿದೆ.

SCROLL FOR NEXT