ಲಾಲು ಪ್ರಸಾದ್ ಯಾದವ್ 
ದೇಶ

ದೇಶದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ವಾತಾವರಣವಿದೆ: ಲಾಲು ಪ್ರಸಾದ್ ಯಾದವ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ದೇಶದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ವಾತಾವರಣವಿದೆ ಎಂದು ಹೇಳಿದ್ದಾರೆ.

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ದೇಶದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ವಾತಾವರಣವಿದೆ ಎಂದು ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡಿರುವ ಬಿಹಾರದ ಮಾಜಿ ಸಿಎಂ, ನೀವು ಯಾವ ಮಾದರಿಯ ಪ್ರಜಾಪ್ರಭುತ್ವವನ್ನು ನಿರ್ಮಿಸುತ್ತಿದ್ದೀರಿ ಮೋದಿಜಿ ಎಂದು ಪ್ರಶ್ನಿಸಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಭಾವನೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. 
ದೇಶದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ವಾತಾವರಣ ನಿರ್ಮಾಣವಾಗಿದ್ದು, ಸಾಂವಿಧಾನಿಕ ಮೌಲ್ಯಗಳು ಅಪಾಯಕ್ಕೆ ಸಿಲುಕಿವೆ, ತೀವ್ರಗಾಮಿತ್ವ ಹೆಚ್ಚುತ್ತಿದೆ ಎಂದು ಲಾಲು ಪ್ರಸಾದ್ ಆತಂಕ ವ್ಯಕ್ತಪಡಿಸಿದ್ದಾರೆ. 
ಒಆರ್ ಒಪಿಗಾಗಿ ಆತ್ಮಹತ್ಯೆ ಮಾಡಿಕೊಂಡ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಯತ್ನಿಸಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿದ್ದ ಪ್ರಕರಣವನ್ನು ಖಂಡಿಸಿರುವ ಆರ್ ಜೆಡಿ ಮುಖಂಡ, ಸರ್ಕಾರದ ವಿರುದ್ಧ ಮಾತನಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮೋದಿ ಸರ್ಕಾರ ಸುದ್ದಿಯಲ್ಲಿರಲು ಯತ್ನಿಸುತ್ತಿರುವ ಮಾರ್ಕೆಟಿಂಗ್ ಸರ್ಕಾರ ಎಂದು ಲಾಲು ಪ್ರಸಾದ್ ಯಾದವ್ ಟೀಕಿಸಿದ್ದಾರೆ. 
ಮೃತ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಯತ್ನಿಸಿದ, ಜನರಿಂದ ಚುನಾಯಿತರಾದ ದೆಹಲಿ ಮುಖ್ಯಮಂತ್ರಿಯನ್ನು ವಶಕ್ಕೆ ಪಡೆಯುವ ಮೂಲಕ ಮೋದಿ ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT