ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆ ಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಸೋಫಿಯನ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭಾರತೀಯ ಯೋಧರು ಹತ್ಯೆ ಮಾಡಿದ್ದಾರೆಂದು ಶನಿವಾರ...

ಸೋಫಿಯನ್: ಜಮ್ಮು ಮತ್ತು ಕಾಶ್ಮೀರದ ಸೋಫಿಯನ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭಾರತೀಯ ಯೋಧರು ಹತ್ಯೆ ಮಾಡಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಕಳೆದ ರಾತ್ರಿ ಪುಲ್ವಾಮ ಜಿಲ್ಲೆಯ ದಾದ್ಸರ ಗ್ರಾಮದಲ್ಲಿ ಗುಂಡಿನ ಶಬ್ಧ ಕೇಳಿ ಬಂದಿತ್ತು. ಹೀಗಾಗಿ ಗ್ರಾಮಸ್ಥರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಂತೆ ತನಿಖೆ ನಡೆಸಲು ಪೊಲೀಸರು ಸ್ಥಳಕ್ಕೆ ಹೋಗುತ್ತಿದ್ದ ವೇಳೆ ದಾರಿ ಮಧ್ಯೆಯೇ ಉಗ್ರರು ಪೊಲೀಸರ ಮೇಲೆ ದಾಳಿ ಮಾಡಿದ್ದರು.

ಸ್ಥಳದಲ್ಲಿ ಉಗ್ರರು ಬೀಡುಬಿಟ್ಟಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆಗೆ ಇಳಿದಿತ್ತು. ಕಾರ್ಯಾಚರಣೆ ವೇಳೆ ಉಗ್ರರು ಭಾರತೀಯ ಸೇನೆ ಮೇಲೆ ಗುಂಡಿನ ದಾಳಿಯನ್ನು ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ ಭಾರತೀಯ ಸೇನೆ ಓರ್ವ ಉಗ್ರನನ್ನು ಸದೆಬಡಿದಿದೆ. ಕಾರ್ಯಾಚರಣೆ ವೇಳೆ ಉಗ್ರರು ಹಾಗೂ ಸೇನೆ ಮಧ್ಯೆ ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಯುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ ಓರ್ವ ಯೋಧನಿಗೆ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರುರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!