ಕಾಶ್ಮೀರದ ಗಡಿಯಲ್ಲಿ ಮತ್ತೆ ಪಾಕಿಸ್ತಾನದಿಂದ ಶೆಲ್ ದಾಳಿ
ಕಾಶ್ಮೀರದಲ್ಲಿ ಮತ್ತೆ ಪಾಕಿಸ್ತಾನ ಸೇನೆ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ. ನ.6 ರಂದು ಬೆಳಿಗ್ಗೆ ಪೂಂಛ್ ಜಿಲ್ಲೆಯ ಕೃಷ್ಣ ಘಟಿ ಸೆಕ್ಟರ್ ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಶೆಲ್ ದಾಳಿ ನಡೆಸಿದೆ.
ಜಮ್ಮು: ಕಾಶ್ಮೀರದಲ್ಲಿ ಮತ್ತೆ ಪಾಕಿಸ್ತಾನ ಸೇನೆ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ. ನ.6 ರಂದು ಬೆಳಿಗ್ಗೆ ಪೂಂಛ್ ಜಿಲ್ಲೆಯ ಕೃಷ್ಣ ಘಟಿ ಸೆಕ್ಟರ್ ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಶೆಲ್ ದಾಳಿ ನಡೆಸಿದೆ.
ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವುದರಲ್ಲಿ ಕನಿಷ್ಟ ನಾಲ್ಕು ಪ್ರದೇಶಗಳಿವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಪಾಕ್ ಸೇನೆಯ ಅಪ್ರಚೋದಿತ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ಎದುರಿಸಿದ್ದು, ಶೆಲ್ ಹಾಗೂ ಗುಂಡಿನ ದಾಳಿ ಮೂಲಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೆ.28 ರಂದು ಭಾರತೀಯ ಸೇನೆ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದ ಬಳಿಕ ಪಾಕಿಸ್ತಾನದಿಂದ ನಡೆಯುತ್ತಿದ್ದ ಗಡಿನಿಯಂತ್ರಣ ರೇಖೆ ಬಳಿಯ ಕದನ ವಿರಾಮ ಉಲ್ಲಂಘನೆ ಮತ್ತಷ್ಟು ಹೆಚ್ಚಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.