ಕಾಶ್ಮೀರದಲ್ಲಿ ಪಾಕ್ ದಾಳಿ: ಓರ್ವ ಯೋಧ ಹುತಾತ್ಮ
ಕಾಶ್ಮೀರದ ಕೃಷ್ಣ ಘಟಿ ಸೆಕ್ಟರ್ ನಲ್ಲಿ ಪಾಕಿಸ್ತಾನ ನಡೆಸಿರುವ ಅಪ್ರಚೋದಿತ ಶೆಲ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದಾನೆ.
ಜಮ್ಮು: ಕಾಶ್ಮೀರದ ಕೃಷ್ಣ ಘಟಿ ಸೆಕ್ಟರ್ ನಲ್ಲಿ ಪಾಕಿಸ್ತಾನ ನಡೆಸಿರುವ ಅಪ್ರಚೋದಿತ ಶೆಲ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದಾನೆ.
22 ಸಿಖ್ ರೆಜಿಮೆಂಟ್ ನ ಗುರ್ ಸೇವಕ್ ಸಿಂಗ್ ನ.6 ರಂದು ಹುತಾತ್ಮನಾಗಿರುವ ಯೋಧನಾಗಿದ್ದಾರೆ ಎಂದು ರಕ್ಷಣಾ ಇಲಾಖೆ ಮಾಹಿತಿ ನೀಡಿದೆ. ಕನಿಷ್ಟ 4 ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದ ವಿರುದ್ಧ ದಾಳಿ ನಡೆಸುತ್ತಿದ್ದು, ಶೆಲ್ ದಾಳಿ ಮುಂದುವರೆದಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 8:40 ರ ವೇಳೆಗೆ ಪಾಕಿಸ್ತಾನ ದಾಳಿ ನಡೆಸಲು ಪ್ರಾರಂಭಿಸಿದ್ದು, ಕಾಶ್ಮೀರದ ನಾಗರಿಕರನ್ನು ಗುರಿಯಾಗಿರಿಸಿಕೊಂಡು ಶೆಲ್ ದಾಳಿ ನಡೆಸುತ್ತಿದೆ. ಪಾಕ್ ಸೇನೆಯ ಅಪ್ರಚೋದಿತ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ಎದುರಿಸಿದ್ದು, ಶೆಲ್ ಹಾಗೂ ಗುಂಡಿನ ದಾಳಿ ಮೂಲಕ ಪ್ರತ್ಯುತ್ತರ ನೀಡುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.