ಜಮ್ಮು-ಕಾಶ್ಮೀರ: ಪಾಕಿಸ್ತಾನ ಸೇನೆ ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಎಂಬಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯ ಇಬ್ಬರು ಯೋಧರು ಮೃತಪಟ್ಟಿದ್ದು, ಇಬ್ಬರು ಸೈನಿಕರು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಬಿಎಸ್ಎಫ್ ಯೋಧ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಒಳಗೆ ನುಸುಳಲು ಸುಲಭವಾಗುವಂತೆ ಮಾಡಲು ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು ಅದರಲ್ಲಿ ಒಬ್ಬ ಸೈನಿಕ ಮತ್ತು ಸೇನಾಧಿಕಾರಿ ಮೃತಪಟ್ಟಿದ್ದಾರೆ. ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ನಾಶಪಡಿಸಿದ್ದು, ಎರಡು ಒಳನುಸುಳುವಿಕೆ ಬಿಡ್ ನ್ನು ನಾಶಪಡಿಸಲಾಗಿದೆ.