ಜಮ್ಮುವಿನ ದೋಡಾದಲ್ಲಿ ಭೂಕುಸಿತಕ್ಕೆ ಸೈನಿಕ ಬಲಿ
ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ಸೈನಿಕನೊಬ್ಬ 70 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ಜಮ್ಮು: ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ಸೈನಿಕನೊಬ್ಬ 70 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ನವೆಂಬರ್ 6 ರಂದು ಜಮ್ಮುವಿನ ದೋಡಾದಲ್ಲಿ ಭೂ ಕುಸಿತ ಉಂಟಾದ ಕಾರಣ ಮಂಜಿತ್ ಸಿಂಗ್ 70 ಅಡಿ ಆಳಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಮಣ್ಣಿನಡಿಯಲ್ಲಿ ಸಿಲುಕಿ ಗಾಯಗೊಂಡಿದ್ದ ಮಂಜಿತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಯೋಧನಿಗೆ ಒಬ್ಬ ಪತ್ನಿ ಹಾಗೂ ಮೂರು ತಿಂಗಳ ಹೆಣ್ಣು ಮಗುವಿದೆ. ಮೃತ ಯೋಧನ ಹುಟ್ಟೂರಿನಲ್ಲಿ ಸಕಲ ಸೇನಾ ಗೌರವಗಳೊಂದೆ ಅಂತ್ಯ ಸಂಸ್ಕಾರ ನಡೆಸಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.