ಬ್ರಿಟನ್ ಪ್ರಧಾನಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಭಾರತಕ್ಕೆ ಆಗಮಿಸಿರುವ ಬ್ರಿಟನ್ ಪ್ರಧಾನಿ ಥೆರೆಸಾ ಮೇ ಅವರೊಂದಿಗೆ ಇಂಡಿಯಾ-ಯುಕೆ ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ-ಬ್ರಿಟನ್ ಬಾಂಧವ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದ್ದಾರೆ.
ಉದ್ಯಮಶೀಲತೆಯನ್ನು ವೃದ್ಧಿಸಲು ವಿಜ್ಞಾನ ಮತ್ತು ತಂತ್ರಜ್ಞಾನ ಅತಿ ಮುಖ್ಯವಾಗಿದೆ, ಅಷ್ಟೇ ಅಲ್ಲದೇ ಭಾರತ-ಬ್ರಿಟನ್ ದ್ವಿಪಕ್ಷೀಯ ಬಾಂಧವ್ಯದಲ್ಲೂ ವಿಜ್ಞಾನ ಮತ್ತು ತಂತ್ರಜ್ಞಾನ, ಆವಿಷ್ಕಾರಗಳು ಮಹತ್ವದ ಪಾತ್ರ ವಹಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ವಿದೇಶ ಪ್ರವಾಸವನ್ನು ಭಾರತಕ್ಕೆ ಕೈಗೊಂಡಿರುವುದಕ್ಕಾಗಿ ಬ್ರಿಟನ್ ಪ್ರಧಾನಿ ಥೆರೆಸಾ ಮೇ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.
ನಮ್ಮ ರಾಷ್ಟ್ರಗಳು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದು, ಇದರ ನೇರ ಪರಿಣಾಮ ವ್ಯಾಪರ ವಾಣಿಜ್ಯ ವಹಿವಾಟುಗಳ ಮೇಲೆ ಪರಿಣಾಮ ಬೀರಲಿವೆ, ನಾವು ಒಟ್ಟಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.