ನವದೆಹಲಿ: ದೆಹಲಿಯ ವಾಯುಮಾಲಿನ್ಯ ಪ್ರಮಾಣ ಅಪಾಯದ ಹಂತಕ್ಕೆ ತಲುಪಿರುವ ವಿಚಾರವಾಗಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ.8 ರಂದು ವಿಚಾರಣೆ ನಡೆಸಲಿದೆ.
ವಾಯುಮಾಲಿನ್ಯ ತಡೆಗಟ್ಟಲು ಕಳೆದ ವರ್ಷ ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿಲ್ಲ ಎಂದು ವಿಜ್ಞಾನ ಮತ್ತು ಪರಿಸರ ಕೇಂದ್ರದ ಸುನಿತಾ ನಾರಾಯಣ್ ಹೇಳಿದ್ದು, ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಟಿಎಸ್ ಠಾಕೂರ್, ನ್ಯಾ.ಡಿ.ವೈ ಚಂದ್ರಚೂಡ್ ಹಾಗೂ ನ್ಯಾ.ಎಲ್ ನಾಗೇಶ್ವರ ರಾವ್ ಅವರನ್ನೊಳಗೊಂಡ ಪೀಠ ಪಿಐಎಲ್ ವಿಚಾರಣೆ ನಡೆಸಲಿದೆ.
ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶಗಳು ಜಾರಿಯಾಗಿರುವ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಸುನಿತಾ ನಾರಾಯಣ್ ಹೇಳಿದ್ದರು. ಇದರೊಂದಿಗೆ ಕೋರ್ಟ್ ಗೆ ಎನ್ ಸಿಆರ್ ನಿಂದ ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಮಾಲಿನ್ಯ ನಿಯಂತ್ರಣ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿತ್ತು. ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಅಪಾಯದ ಹಂತಕ್ಕೆ ತಲುಪಿದ್ದು, ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.