ಉತ್ತರ ಪ್ರದೇಶ ಗ್ರಾಮಸ್ಥರಿಂದ ಹಿಲರಿ ಕ್ಲಿಂಟನ್ ಗೆಲುವಿಗೆ ಪ್ರಾರ್ಥನೆ
ಉತ್ತರ ಪ್ರದೇಶದ ಜಾಬೂರೌಳಿ ಗ್ರಾಮದ ಜನತೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಜಯಗಳಿಸಬೇಕು ಎಂದು ಪ್ರಾರ್ಥಿಸಿ ವಿಶೇಷ ಹೋಮ ...
ಲಕ್ನೋ: ಉತ್ತರ ಪ್ರದೇಶದ ಜಾಬೂರೌಳಿ ಗ್ರಾಮದ ಜನತೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಜಯಗಳಿಸಬೇಕು ಎಂದು ಪ್ರಾರ್ಥಿಸಿ ವಿಶೇಷ ಹೋಮ ಹವನ ನಡೆಸಿದ್ದಾರೆ.
ಕ್ಲಿಂಟನ್ ಫೌಂಡೇಶನ್ ಈ ಗ್ರಾಮವನ್ನು ದತ್ತು ತೆಗೆದುಕೊಂಡು ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ನೆರವೇರಿಸಿದೆ. ಹೀಗಾಗಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಹಿಲರಿ ಭಾವಚಿತ್ರವಿಟ್ಟು ಹೋಮ ಹವನ ನಡೆಸಿದ್ದಾರೆ.
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ವಿರುದ್ಧ ಹಿಲರಿ ಕ್ಲಿಂಟನ್ ನವೆಂಬರ್ 8 ರಂದು ನಡೆಯುವ ಚುನಾವಣೆಯಲ್ಲಿ ಜಯಗಳಿಸಬೇಕೆಂದು ಪವಿತ್ರ ಹೋಮ ಹವನ- ಪೂಜೆ ನೆರವೇರಿಸಿದ್ದಾರೆ.
20 ಕೋಟಿ ಜನ ಅಮೆರಿಕಾದ ಭವಿಷ್ಯ ನಿರ್ಧರಿಸಲಿದ್ದಾರೆ. ಮೂರುವರೆ ಕೋಟಿ ಜನ ಈಗಾಗಲೇ ತಮ್ಮ ಮತ ಚಲಾಯಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.