ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿ ವಾಯು ಮಾಲಿನ್ಯ: 48 ಗಂಟೆಗಳಲ್ಲಿ ಕನಿಷ್ಠ ಸಾಮಾನ್ಯ ಕಾರ್ಯಕ್ರಮ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾನಿಲ್ಯ ನಿಯಂತ್ರಿಸಲು 48 ಗಂಟೆಗಳಲ್ಲಿ ಕನಿಷ್ಠ ಸಾಮಾನ್ಯ ಕಾರ್ಯಕ್ರಮ....

ಸಾಂದರ್ಭಿಕ ಚಿತ್ರ
Lingaraj Badiger
Updated On : 8 Nov 2016, 5:25 am
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾನಿಲ್ಯ ನಿಯಂತ್ರಿಸಲು 48 ಗಂಟೆಗಳಲ್ಲಿ ಕನಿಷ್ಠ ಸಾಮಾನ್ಯ ಕಾರ್ಯಕ್ರಮ ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿಎಸ್ ಥಾಕೂರ್ ನೇತೃತ್ವದ ಪೀಠ, ರಾಷ್ಟ್ರರಾಜಧಾನಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.
ಇದೊಂದು ಸಾರ್ವಜನಿಕ ಆರೋಗ್ಯದ ತುರ್ತು ಪರಿಸ್ಥಿತಿ ಎಂದಿರುವ ಕೋರ್ಟ್, ವಾಯು ಮಾಲಿನ್ಯ ನಿಯಂತ್ರಿಸಲು ಎರಡು ದಿನಗಳಲ್ಲಿ ಕನಿಷ್ಠ ಸಾಮಾನ್ಯ ಕಾರ್ಯಕ್ರಮ ರೂಪಿಸಿ, ಅದನ್ನು ತನಗೆ ಸಲ್ಲಿಸುವಂತೆ ಆದೇಶಿಸಿ, ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.

Advertisement

Advertisement

ಇದಕ್ಕೂ ಮುನ್ನ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ವಾಯು ಮಾಲಿನ್ಯ ನಿಯಂತ್ರಿಸಲು ಹೆಲಿಕಾಪ್ಟರ್ ಮೂಲಕ ಮಳೆ ಸುರಿಸುವಂತೆ ದೆಹಲಿ ಹಾಗೂ ನೆರೆಯ ರಾಜ್ಯಗಳಿಗೆ ಸೂಚಿಸಿತ್ತು. ಅಲ್ಲದೆ ರಾಷ್ಟ್ರ ರಾಜಧಾನಿಯಲ್ಲಿ ಒಂದು ವಾರಗಳ ಕಾಲ ನಿರ್ಮಾಣ ಕಾಮಗಾರಿಗಳಿಗೆ ನಿಷೇಧ ಹೇರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments