ನವದೆಹಲಿ: ನಾಪತ್ತೆಯಾಗಿರುವ ಜವಾಹರ್ ಲಾಲ್ ನೆಹರು (ಜೆಎನ್ ಯು) ವಿವಿಯ ವಿದ್ಯಾರ್ಥಿಯ ಇನ್ನೂ ಪತ್ತೆಯಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜೆಎನ್ ಯು ವಿವಿ ವಿದ್ಯಾರ್ಥಿ ಸಂಘಟನೆಯ ಮುಖಂಡ ಕನ್ಹಯ್ಯ ಕುಮಾರ್, ಕೇಂದ್ರ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಪತ್ತೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕನ್ಹಯ್ಯ ಕುಮಾರ್ ಕೇಂದ್ರ ಸರ್ಕಾರಕ್ಕೆ ಜೆಎನ್ ಯು ವಿವಿಯಲ್ಲಿ 3೦೦೦ ಕಾಂಡೋಮ್ ಗಳನ್ನು ಹುಡುಕಲು ಸಾಧ್ಯವಾಗುತ್ತದೆ. ಆದರೆ ನಾಪತ್ತೆಯಾಗಿರುವ ವಿದ್ಯಾರ್ಥಿ ನಜೀಬ್ ಅಹ್ಮದ್ ಅವರನ್ನು ಹುಡುಕಲು ಸಾಧ್ಯವಾಗುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.
ತಮ್ಮ ಬಿಹಾರ್ ಟು ತಿಹಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿರುವ ಕನ್ಹಯ್ಯ ಕುಮಾರ್, ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಜೆಎನ್ ಯು ನಲ್ಲಿ ಎಷ್ಟು ಕಾಂಡೋಮ್ ಗಳನ್ನು ಬಳಕೆ ಮಾಡಲಾಗುತ್ತಿತ್ತು ಎಂದು ಪತ್ತೆ ಮಾಡುವಷ್ಟು ಸಾಮರ್ಥ್ಯ ಹೊಂದಿದೆ. ಆದರೆ ಅದೇ ಸಾಮರ್ಥ್ಯವನ್ನು ನಜೀಬ್ ಅಹ್ಮದ್ ನನ್ನು ಹುಡುಕಲು ಬಳಕೆ ಮಾಡಲಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅ.14 ರಿಂದ ನಜೀಬ್ ಅಹ್ಮದ್ ನಾಪತ್ತೆಯಾಗಿರುವುದರಿಂದ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics