ಗಿರೀಶ್ ನಿಕಂ 
ದೇಶ

ಹೃದಯಾಘಾತದಿಂದ ಹಿರಿಯ ಪತ್ರಕರ್ತ ಗಿರೀಶ್ ನಿಕಂ ಸಾವು

ತೀವ್ರ ಹೃದಯಘಾತದಿಂದ ಹಿರಿಯ ಪತ್ರಕರ್ತ ಹಾಗೂ ಟಿವಿ ನಿರೂಪಕ ಗಿರೀಶ್‌ ನಿಕಂ (59) ನಿಧನರಾಗಿದ್ದಾರೆ.

ನವದೆಹಲಿ: ತೀವ್ರ ಹೃದಯಘಾತದಿಂದ ಹಿರಿಯ ಪತ್ರಕರ್ತ ಹಾಗೂ ಟಿವಿ ನಿರೂಪಕ ಗಿರೀಶ್‌ ನಿಕಂ (59) ನಿಧನರಾಗಿದ್ದಾರೆ.

ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ಅವರು ತೀವ್ರ ಅಸ್ವಸ್ಥರಾದರು. ಕೂಡಲೇ ಗಿರೀಶ್ ನಿಕಂ ಅವರನ್ನು ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.

ಸ್ಟಾರ್‌ ಆಫ್‌ ಮೈಸೂರು ಪತ್ರಿಕೆ ಮೂಲಕ ವೃತ್ತಿ ಆರಂಭಿಸಿದ್ದರು. ಅನಂತರ ಬೆಂಗಳೂರಿಗೆ ಬಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ಪತ್ರಿಕೆ ಸೇರಿದ್ದರು.

ಆಂಗ್ಲ ಮಾಧ್ಯಮ ಸಂಸ್ಥೆಗಳಾದ  ಇಂಡಿಯಾ ಟುಡೆ, ಡೆಕ್ಕನ್‌  ಕ್ರಾನಿಕಲ್‌ , ನ್ಯೂಸ್‌ ಟುಡೆಯಲ್ಲೂ ಸೇವೆ ಸಲ್ಲಿಸಿದ್ದ ಅವರು ರಾಜ್ಯಸಭೆ ಟಿವಿಯಲ್ಲೂ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದರು.

ನಿಕಂ ಅವರ ದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಬುಧವಾರ (ನ.9)  ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹಲವು ಗಣ್ಯರು ಮೃತರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT