ಮುಜಾಫರನಗರ: 2007ರಲ್ಲಿ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೋಜ್ ಕುಮಾರ್ ಅವರು, ಅಪರಾಧಿಗಳಾದ ಇಸ್ರೈಲ್ ಮತ್ತು ಮೋನುಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ತಲಾ ಒಂದು ಸಾವಿರ ರುಪಾಯಿ ತಂಡ ವಿಧಿಸಿದ್ದಾರೆ.
ಸರ್ಕಾರಿ ಅಭಿಯೋಜಕ ಜಾವೇದ್ ಅಲಿ ಪ್ರಕಾರ, ಆಗಸ್ಟ್ 20, 2007ರಲ್ಲಿ ಅಝಿಜ್ ಪುರ ಗ್ರಾಮದಲ್ಲಿರುವ ಇಸ್ರೈಲ್ ಮತ್ತು ಮೋನು ಮನೆ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮನೆಯಲ್ಲಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ ಈ ಸಂಬಂಧ ಇಬ್ಬರ ವಿರುದ್ಧ ಗೋಹತ್ಯೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದರು.