ನವದೆಹಲಿ: ಅಮೆರಿಕಾ ಸಂಯುಕ್ತ ಸಂಸ್ಥಾನದ 45ನೇ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ನಿಮ್ಮ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಭಾರತದ ಬಗ್ಗೆ ಅಭಿವ್ಯಕ್ತಿಪಡಿಸಿದ ಸ್ನೇಹ ಮನೋಭಾವನೆಯನ್ನು ನಾವು ಶ್ಲಾಘಿಸುತ್ತೇವೆ. ಮುಂದಿನ ದಿನಗಳಲ್ಲಿ ಭಾರತ-ಅಮೆರಿಕಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ತಮ್ಮ ಜೊತೆಗೂಡಿ ಕೆಲಸ ಮಾಡಲು ಬಯಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.