ರು,1000 ಬದಲು ರು.2000 ನೋಟ್ ಕಪ್ಪು ಹಣ ಹೇಗೆ ನಿಯಂತ್ರಿಸುತ್ತದೆ: ರಾಹುಲ್ ಅಚ್ಚರಿ
500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಉಪಾಧ್ಯಕ್ಷ....
ನವದೆಹಲಿ: 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, 1000 ರುಪಾಯಿ ಬದಲು 2000 ರುಪಾಯಿ ನೋಟ್ ಚಲಾವಣೆಗೆ ತರುವುದರಿಂದ ಕಪ್ಪು ಹಣ ನಿಯಂತ್ರಿಸಲು ಹೇಗೆ ಸಾಧ್ಯ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಜನರ ಬಗ್ಗೆ ಕಾಳಜಿ ಹೊಂದಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
1000 ರುಪಾಯಿ ಬದಲು 2000 ರುಪಾಯಿ ಚಲಾವಣೆಗೆ ತರುವುದರಿಂದ ಕಪ್ಪು ಹಣ ನಿಯಂತ್ರಿಸಲು ಹೇಗೆ ಸಾಧ್ಯ? ಎಂದು ಮೋದಿ ಲಾಜಿಕ್ ಅನ್ನು ಪ್ರಶ್ನಿಸಿರುವ ರಾಹುಲ್, ಮೋದಿ ಸರ್ಕಾರ ರೈತರು, ಸಣ್ಣ ವ್ಯಾಪಾರಿಗಳನ್ನು ಮತ್ತು ಗೃಹಣಿಯರನ್ನು ಬೀದಿಗೆ ಎಸೆಯಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣ, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಯುವುದಕ್ಕಾಗಿ ಮಧ್ಯರಾತ್ರಿಯಿಂದಲೇ 500 ಹಾಗೂ 1000 ರುಪಾಯಿ ನೋಟ್ ಗಳಿಗೆ ನಿಷೇಧ ಹೇರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.