ಲಖನೌ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಬ್ಯಾಂಕ್ ಶಾಖೆಗಳಲ್ಲಿ ನೂತನ ನೋಟ್ ಗಳ ಲಭ್ಯತೆಯನ್ನು ಪರಿಶೀಲಿಸುತ್ತಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿಗಳು ಪ್ರಯಾಣಿಸುತ್ತಿದ್ದ ವ್ಯಾನ್ ಹಾಗೂ ಟ್ರಕ್ ನಡುವೆ ಗುರುವಾರ ಡಿಕ್ಕಿ ಸಂಭವಿಸಿ ಚಾಲಕ ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ.
ಬ್ಯಾಂಕ್ ಶಾಖೆಗಳಲ್ಲಿ ನೋಟ್ ಗಳ ಲಭ್ಯತೆ ಪರಿಶೀಲಿಸಿ ವಾಪಸ್ ಲಖನೌಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ವ್ಯಾನ್ ರಸ್ತೆಯಿಂದ ಕೆಳಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ಬಗ್ಗೆ ಬ್ಯಾಂಕ್ ನ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.