ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಭ್ರಷ್ಟಾಚಾರದ ವಿರುದ್ದ ಸರ್ಕಾರದ ಸೀಮಿತ ದಾಳಿ: ರಾಜನಾಥ ಸಿಂಗ್

ದುಬಾರಿ ಬೆಲೆಯ ನೋಟುಗಳ ಮೇಲೆ ನಿಷೇಧ ಹೇರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರಶಂಸಿಸಿದ್ದಾರೆ...

ಬಲ್ಲಿಯಾ: ದುಬಾರಿ ಬೆಲೆಯ ನೋಟುಗಳ ಮೇಲೆ ನಿಷೇಧ ಹೇರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರಶಂಸಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಲ್ಲಿಯಾ ಜಿಲ್ಲೆಯಲ್ಲಿ ನಡೆಯುತ್ತಿರುವ ಪರಿವರ್ತನ್ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ನಮ್ಮ ಪ್ರಧಾನಮಂತ್ರಿಯವರು ಭ್ರಷ್ಟಾಚಾರದ ವಿರುದ್ಧ ಸೀಮಿತ ದಾಳಿ ನಡೆಸುವುದಾಗಿ ಬಹಿರಂಗವಾಗಿ ಹೇಳಿದ್ದಾರೆ. ಹೀಗಾಗಿ ಭ್ರಷ್ಟಾಚಾರ ಮಾಡುವುದಕ್ಕೆ ಯಾರೊಬ್ಬರು ಇನ್ನುಮುಂದೆ ಧೈರ್ಯ ಮಾಡುವುದಿಲ್ಲ. ಕೇಂದ್ರದ ನಿರ್ಧಾರದಿಂದ ಪ್ರಸ್ತುತ ಜನರಿಗೆ ಸಮಸ್ಯೆ ಎದುರಾಗಿರಬಹುದು. ಆದರೆ, ಮುಂದೆ ಇದು ಉಪಯುಕ್ತವಾಗಲಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ಕಠಿಣ ನಿರ್ಧಾರದಿಂದ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಪ್ರಚೋದನೆ ನೀಡಲು ನಕಲು ನೋಟುಗಳನ್ನು ತಯಾರು ಮಾಡುತ್ತಿದ್ದ ಪಾಕಿಸ್ತಾನದ ಮೇಲೆ ಹೊಡೆತ ಬೀಳಲಿದೆ. ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ನನಗೆ ತಿಳಿದಿದೆ. ಆದರೆ, ಒಳ್ಳೆಯದಾಗ ಬೇಕಿದ್ದರೆ ಸಮಸ್ಯೆಗಳನ್ನೂ ಎದುರಿಸಬೇಕಾಗುತ್ತದೆ. ಈ ಸಮಸ್ಯೆಗಳು ಕೇವಲ ಕೆಲ ದಿನಗಳು ಮಾತ್ರ. ಮುಂದಿನ ದಿನಗಳಲ್ಲಿ ಭಾರತದಲ್ಲಿ ಆರ್ಥಿಕ ಬಲ ಹೆಚ್ಚಾಗಲಿದೆ.

ನಕಲಿ ನೋಟುಗಳನ್ನು ಮುದ್ರಿಸಿ ಭಾರತವನ್ನು ನಾಶ ಮಾಡಲು ಯತ್ನಿಸಿದ್ದ, ಪಾಕಿಸ್ತಾನದ ಯತ್ನ ವಿಫಲವಾಗುತ್ತದೆ. ಭಯೋತ್ಪಾದಕರು ಹಾಗೂ ಪಾಕಿಸ್ತಾನ ಬೆಳವಣಿಗೆಗೆ ನಕಲಿ ನೋಟುಗಳು ಸಹಾಯಕವಾಗುತ್ತಿತ್ತು. ಇದೀಗ ರು.500 ಹಾಗೂ 1,000 ಮುಖಬೆಲೆ ನೋಟುಗಳ ಮೇಲೆ ನಿಷೇಧ ಹೇರಿರುವುದರಿಂದ ಅವುಗಳ ಮೇಲೆ ಹೊಡೆತ ಬೀಳಲಿದೆ ಎಂದಿದ್ದಾರೆ.

ಇದೇ ವೇಳೆ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಆಯ್ಕೆಯಾಗಿರುವ ಕುರಿತಂತೆ ಮಾಡನಾದಿರುವ ಅವರು, ಟ್ರಂಪ್ ಅವರು ಚುನಾವಣೆಯನ್ನು ಗೆಲಲ್ಲು ಹೇಗೆ ಸಾಧ್ಯವಾಯಿತು? ಚುನಾವಣಾ ರ್ಯಾಲಿಯಲ್ಲಿ ಟ್ರಂಪ್ ಅವರು ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇ ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೀತಿಗಳನ್ನು ಅನುಸರಿಸಿ ಕೆಲಸಗಳನ್ನು ಮಾಡುತ್ತೇನೆಂದು ಹೇಳಿದ್ದರು. ಇದೀಗ ಟ್ರಂಪ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಭಾರತ ಜಾಗತಿಕವಾಗಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳುತ್ತಿದೆ. ವಿಶ್ವದಲ್ಲಿ ಆರ್ಥಿಕವಾಗಿಯೂ ಉತ್ತಮವಾಗಿ ಅಭಿವೃದ್ಧಿ ಕಾಣುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!