ಪಂಜಾಬ್ ಕಾಂಗ್ರೆಸ್ ಮುಖಂಡ ಅಮರಿಂದರ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಹರ್ಯಾಣಕ್ಕೆ ನೀರು ಹರಿಸುವಂತೆ ಸುಪ್ರೀಂ ತೀರ್ಪು; ಪಂಜಾಬ್ "ಕೈ" ಶಾಸಕರ ಸಾಮೂಹಿಕ ರಾಜಿನಾಮೆ!

ಹರ್ಯಾಣಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ವಿರೋಧಿಸಿ ಪಂಜಾಬ್ ಕಾಂಗ್ರೆಸ್ ಘಟಕದ ಎಲ್ಲ ಶಾಸಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

ಜಲಂಧರ್: ಹರ್ಯಾಣಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ವಿರೋಧಿಸಿ ಪಂಜಾಬ್ ಕಾಂಗ್ರೆಸ್ ಘಟಕದ ಎಲ್ಲ ಶಾಸಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ಕಾವೇರಿ ವಿವಾದಂತೆಯೇ ಅತ್ತ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದ ತಾರಕಕ್ಕೇರಿದ್ದು, ಹರ್ಯಾಣ ರಾಜ್ಯಕ್ಕೆ ನೀರು ಹರಿಸುವಂತೆ  ನಿನ್ನೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಕಾಂಗ್ರೆಸ್ ಸಂಸದ  ಅಮರಿಂದರ್ ಸಿಂಗ್ ತಮ್ಮ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರೂ ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

ಅಂತೆಯ ಪಕ್ಷೇತರ ಶಾಸಕ ರಜನೀಶ್ ಬಾಬ್ಬಿ ಅವರು ಕೂಡ ರಾಜಿನಾಮೆ ಸಲ್ಲಿಕೆ ಮಾಡಿದ್ದು, ಪಂಜಾಬ್ ನಲ್ಲಿ ಇದೀಗ ರಾಜಕೀಯ ಬಿಕ್ಕಟ್ಟು ಎದುರಾಗಿದೆ.

ಏನಿದು ವಿವಾದ?
2003ರಲ್ಲಿ ಸಟ್ಲೇಜ್-ಯಮುನಾ ನದಿಗೆ ಕಾಲುವೆ ನಿರ್ಮಿಸಿ ಅದರ ಮೂಲಕ ಹರ್ಯಾಣ ರಾಜ್ಯಕ್ಕೆ ನೀರು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಇದಕ್ಕೆ ಪಂಜಾಬ್ ನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.  ಅಂತಿಮವಾಗಿ ಅಮರಿಂದರ್ ಸಿಂಗ್ ನೇತೃತ್ವ ಕಾಂಗ್ರೆಸ್ ಸರ್ಕಾರ 2004ರಲ್ಲಿ ಹರ್ಯಾಣ ರಾಜ್ಯದೊಂದಿಗಿನ ನೀರು ಹಂಚಿಕೆ ಒಪ್ಪಂದವನ್ನು ಕೊನೆಗೊಳಿಸುವ ಮಸೂದೆಯನ್ನು ರಚಿಸಿತ್ತು. ಇದು ವಿಧಾನಸಭೆಯಲ್ಲೂ  ಅಂಗೀಕಾರವಾಗಿತ್ತು. ಇದೀಗ ಮತ್ತೆ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಹರ್ಯಾಣಕ್ಕೆ ನೀರು ಬಿಡುವಂತೆ ಪಂಜಾಬ್ ಸರ್ಕಾರಕ್ಕೆ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ