ರಾಹುಲ್ ಗಾಂಧಿಗೂ ತಟ್ಟಿದ ನೋಟ್ ನಿಷೇಧದ ಬಿಸಿ, ಬ್ಯಾಂಕ್ ಕ್ಯೂನಲ್ಲಿ ಕಾಂಗ್ರೆಸ್ ನಾಯಕ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೂ 500 ಹಾಗೂ 1000 ರುಪಾಯಿ ನೋಟ್ ನಿಷೇಧದ ಬಿಸಿ ತಟ್ಟಿದ್ದು, ನೋಟ್ ಬದಲಾವಣೆಗಾಗಿ...
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೂ 500 ಹಾಗೂ 1000 ರುಪಾಯಿ ನೋಟ್ ನಿಷೇಧದ ಬಿಸಿ ತಟ್ಟಿದ್ದು, ನೋಟ್ ಬದಲಾವಣೆಗಾಗಿ ಶುಕ್ರವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ತೆರಳಿ ಜನಸಾಮಾನ್ಯರಂತೆ ಕ್ಯೂನಲ್ಲಿ ನಿಂತುಕೊಂಡಿದ್ದರು.
ಇಂದು ಬೆಳಗ್ಗೆ ಸಂಸತ್ ರಸ್ತೆಯಲ್ಲಿರುವ ಎಸ್ ಬಿಐ ಬ್ಯಾಂಕ್ ಗೆ ಭೇಟಿ ನೀಡಿದ ರಾಹುಲ್ ಗಾಂಧಿ 4000 ರುಪಾಯಿ ಬದಲಾವಣೆಗಾಗಿ ಕ್ಯೂನಲ್ಲಿ ನಿಂತಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನಾನು ನಾಲ್ಕು ಸಾವಿರ ರುಪಾಯಿ ವಿನಿಮಯ ಮಾಡಿಕೊಳ್ಳಲು ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ ಸಾಮಾನ್ಯರ ಕಷ್ಟ ಅರ್ಥವಾಗುವುದಿಲ್ಲ. ಕೇಂದ್ರದ ಈ ನಿರ್ಧಾರದಿಂದಾಗಿ ಬಡವರು ಪರದಾಡುವಂತಾಗಿದೆ. ಸೂಟ್, ಬೂಟ್ ಧರಿಸಿದ ಕೋಟ್ಯಾಧೀಶರು ಯಾರಾದರೂ ಕ್ಯೂನಲ್ಲಿದ್ದಾರೆಯೇ? ಹಾಗಾದರೆ ಸರ್ಕಾರ ಯಾರಿಗಾಗಿ ಹೊಸ ಕಾನೂನು ತಂದಿದೆ? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ, ಮೋದಿ ಸರ್ಕಾರ ಕೇವರ 15-20 ಮಂದಿಗಾಗಿ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.