ನವದೆಹಲಿ: ರಾಜಧಾನಿ ದೆಹಲಿಯಲ್ಲಿರುವ ಕೃಷಿ ಭವನದ ನೆಲಮಹಡಿಯಲ್ಲಿ ಗುರುವಾರ ತಡರಾತ್ರಿ ಅವಘಡ ಸಂಭವಿಸಿರುವುದಾಗಿ ಶುಕ್ರವಾರ ತಿಳಿದುಬಂದಿದೆ.
ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಕೃಷಿ ಭವನದ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹೊಗೆಯಾಡುತ್ತಿದ್ದುದ್ದನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ಘಟನೆಯಲ್ಲಿ ಯಾವುದೇ ಸಾವು-ನೋವಾಗಲಿ, ನಷ್ಟಗಳಾಗಿಲಿ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.
ನೆಲಮಹಡಿಯಲ್ಲಿ ಕಸವನ್ನು ಸಂಗ್ರಹ ಮಾಡಿದ್ದರಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ 6 ಅಗ್ನಿಶಾಮಕ ದಳದ ವಾಹನಗಳು ಬಂದು ಬೆಂಕಿ ನಂದಿಸುವ ಕಾರ್ಯವನ್ನು ಕೈಗೊಂಡಿತ್ತು. ಇದೀಗ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.