ಶ್ರೀನಗರ: ಶುಕ್ರವಾರ ಪ್ರಾರ್ಥನೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಅಧಿಕಾರಿಗಳು ಶ್ರೀನಗರದ ಹಲವೆಡೆ ಕರ್ಫ್ಯೂ ಜಾರಿ ಮಾಡಿರುವುದಾಗಿ ಹೇಳಿದ್ದಾರೆ.
ಪ್ರಾರ್ಥನೆ ಬಳಿಕ ಕಾಲ್ನಡಿಗೆ ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಶ್ರೀನಗರದ 7 ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಪ್ರತ್ಯೇಕತಾವಾದಿ ನಾಯಕ ಮಿರ್ವೇಜ್ ಉಮರ್ ಫರೂಕ್ ಅವರಿಗೆ ಗೃಹ ಬಂಧನವನ್ನು ವಿಧಿಸಲಾಗಿತ್ತು. ಅಲ್ಲದೆ, ಮುಹಮ್ಮದ್ ಯಾಸಿನ್ ಮಲಿಕ್ ಅವರನ್ನು ಬಂಧನಕ್ಕೊಳಪಡಿಸಿ ಶ್ರೀನಗರ ಕೇಂದ್ರೀಯ ಕಾರಾಗೃಹಕ್ಕೆ ರವಾನೆ ಮಾಡಲಾಗಿತ್ತು. ಗಿಲಾನಿಯವರಿಗೆ ವಿಧಿಸಲಾಗಿದ್ದ ಗೃಹ ಬಂಧನವನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜುಲೈ 8 ರಂದು ಹಿಜ್ಜುಲ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ವಾನಿಯನ್ನು ಭದ್ರತಾ ಸಿಬ್ಬಂದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಾದ್ಯಂತ ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಮುಂದುವರೆಯುತ್ತಲೇ ಬಂದಿದ್ದು, ಈಗಲೂ ಶ್ರೀನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಕಾಶ್ಮೀರದಲ್ಲಿ ನಡೆದ ಹಿಂಸಾಚಾರದಲ್ಲಿ ಈ ವರೆಗೂ 12 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ,