ಸುಬ್ರಮಣಿಯನ್ ಸ್ವಾಮಿ 
ದೇಶ

ರತನ್ ಟಾಟಾರಿಂದ ಟಾಟಾ ಕುಟುಂಬಕ್ಕೆ ಕೆಟ್ಟ ಹೆಸರು: ಸುಬ್ರಮಣಿಯನ್ ಸ್ವಾಮಿ

ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಒಬ್ಬ ಭ್ರಷ್ಟ ವ್ಯಕ್ತಿ ಮತ್ತು ಅವರಿಂದ ಟಾಟಾ ಕುಟುಂಬಕ್ಕೆ ಕೆಟ್ಟ ಹೆಸರು ಬಂದಿದೆ ಎಂದು ಬಿಜೆಪಿ...

ನವದೆಹಲಿ: ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಒಬ್ಬ ಭ್ರಷ್ಟ ವ್ಯಕ್ತಿ ಮತ್ತು ಅವರಿಂದ ಟಾಟಾ ಕುಟುಂಬಕ್ಕೆ ಕೆಟ್ಟ ಹೆಸರು ಬಂದಿದೆ ಎಂದು ಬಿಜೆಪಿ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಶುಕ್ರವಾರ ಆರೋಪಿಸಿದ್ದಾರೆ.
ಪ್ರಸ್ತೂತ ಟಾಟಾ ಸನ್ಸ್ ಮತ್ತು ಸೈರಸ್ ಮಿಸ್ತ್ರಿ ನಡುವಿನ ಮುಸುಕಿನ ಗುದ್ದಾಟದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಮತ್ತು ಕಂಪನಿಯನ್ನು ಸರ್ಕಾರದ ವಶಕ್ಕೆ ಪಡೆಯುವ ಅಗತ್ಯ ಇದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.
ಮಿಸ್ತ್ರಿ ಒಬ್ಬ ಪ್ರಾಮಾಣಿಕ ವ್ಯಕ್ತಿ. ಆದರೆ ಟಾಟಾ ಒಬ್ಬ ಭ್ರಷ್ಟ ವ್ಯಕ್ತಿಯಾಗಿದ್ದು, ಹಲವು ವಿಚಾರಗಳನ್ನು ಮುಚ್ಚಿಟ್ಟಿದ್ದಾರೆ. ಏರ್ ಏಷ್ಯಾ ವಿಚಾರದಲ್ಲಿ ಅದು ಈಗಾಗಲೇ ಬಹಿರಂಗವಾಗಿದೆ. ಇನ್ನು ಡೋಕೋಮೊ ವಂಚನೆ, ಶಿವ ಶಂಕರನ್ ವಂಚನೆ ಹಾಗೂ ರಾಡಿಯಾ ಪ್ರಕರಣಗಳಲ್ಲಿ ಟಾಟಾ ಭಾಗಿಯಾಗಿದ್ದು, ಈ ವ್ಯಕ್ತಿಯಿಂದ ಟಾಟಾ ಕುಟುಂಬಕ್ಕೆ ಒಂದು ಕೆಟ್ಟ ಹೆಸರು ಮತ್ತು ಟಾಟಾ ದತ್ತು ಪುತ್ರ ಎಂದು ಸ್ವಾಮಿ ಹೇಳಿದ್ದಾರೆ.
ಅಕ್ಟೋಬರ್ 24ರಂದು ಸೈರಸ್ ಮಿಸ್ತಿ ಅವರನ್ನು ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದ್ದು, ಉದ್ಯಮ ವಲಯಕ್ಕೆ ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!