ಉತ್ತರ ಪ್ರದೇಶ: ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ 
ದೇಶ

ಉತ್ತರ ಪ್ರದೇಶ: ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 10 ಸಾವು, ಹಲವರಿಗೆ ಗಾಯ

ಉತ್ತರ ಪ್ರದೇಶದ ಶಾಹಿದಾಬಾದ್ ನ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 10 ಮಂದಿ ಸಾವನ್ನಪ್ಪಿ ಹಲವರಿಗೆ ಗಾಯವಾಗಿರುವ ಘಟನೆ ಶುಕ್ರವಾರ...

ನವದೆಹಲಿ: ಉತ್ತರ ಪ್ರದೇಶದ ಶಾಹಿದಾಬಾದ್ ನ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 10 ಮಂದಿ ಸಾವನ್ನಪ್ಪಿ ಹಲವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.

ಶಾಹಿಬಾದ್ ನಲ್ಲಿರುವ ಡೇನಿಮ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ತಿಳಿದುಬಂದಿದೆ.  ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಬೆಂಕಿ ಅವಘಡ ಸಂಭವಿಸಿರುವುದಾಗಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಮಾಹಿತಿ ತಿಳಿಯಿತು. ಕೂಡಲೇ ಅಗ್ನಿಶಾಮಕ ದಳದ ವಾಹನದೊಂದಿಗೆ ಸ್ಥಳಕ್ಕೆ ಹೋಗಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅವಘಡ ಸಂಭವಿಸುವ ವೇಳೆ ಕೆಲಸಗಾರರು ಕಾರ್ಖಾನೆಯ ಒಳಗಿದ್ದರು. ಪ್ರಸ್ತುತ ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ