ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ 
ದೇಶ

ಜೆಎನ್'ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ದೆಹಲಿ ಕ್ರೈಂ ಬ್ರಾಂಚ್'ಗೆ ಪ್ರಕರಣ ಹಸ್ತಾಂತರ

ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ...

ನವದೆಹಲಿ: ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿದೆ. 
ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಯಾವುದೇ ರೀತಿಯ ಸುಳಿವುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಜೀಬ್ ಅಹ್ಮದ್ ಅವರ ತಾಯಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿದ್ದರು. 
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಮಿಸಿದ್ದ ಸರ್ಕಾರ, ಪ್ರಕರಣದ ತನಿಖೆಯನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಿದೆ ಎಂದು ಹಿರಿಯ ಅಧಿಕಾರಿಘಲು ಮಾಹಿತಿ ನೀಡಿದ್ದಾರೆ. 
ಜೆಎನ್ ಯುನಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಜೀಬ್ ಅಹ್ಮಮದ್ (27) ಎಂಬ ವಿದ್ಯಾರ್ಥಿ ಕಳೆದ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!