ಹೈದರಾಬಾದ್: ಸೆಲ್ಫಿಗಾಗಿ ಪ್ರಾಣ ಕಳೆದುಕೊಂಡ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ದಾರುಣ ಘಟನೆ...
ಹೈದರಾಬಾದ್: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ದಾರುಣ ಘಟನೆ ತೆಲಂಗಾಣದ ಕಮ್ಮಮ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಕಮ್ಮಮ್ ಜಿಲ್ಲೆಯ ನಾಗಾರ್ಜನ ಸಾಗರದ ಕಾಲುವೆ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕಾಲುವೆಗೆ ಇಳಿದಿದ್ದರು. ನೀರಿನ ಸೆಳೆತ ಜೋರಾಗಿದ್ದರಿಂದ ನಿಯಂತ್ರಣ ತಪ್ಪಿ ಕಾಲುವೆಗೆ ಬಿದಿದ್ದಾರೆ ಎಂದು ಅವರು ಸ್ನೇಹಿತಿರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು 21 ವರ್ಷದ ಪರಮೇಶ್ವರ ರೆಡ್ಡಿ ಹಾಗೂ 20 ವರ್ಷದ ನಾಗಾರ್ಜುನ ಎಂದು ಗುರುತಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳು ಕಮ್ಮಮ್ ನ ಖಾಸಗಿ ಕಾಲೇಜ್ ನಲ್ಲಿ ಬಿ.ಟೆಕ್ ಮಾಡುತ್ತಿದ್ದರು ಎನ್ನಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.