ಯೋಗ ಗುರು ಬಾಬಾ ರಾಮ್ ದೇವ್ 
ದೇಶ

ದುಬಾರಿ ನೋಟಿನ ಮೇಲೆ ನಿಷೇಧ: ಕೇಂದ್ರದ ಬೆಂಬಲಕ್ಕೆ ನಿಂತ ರಾಮ್ ದೇವ್

ರು.500 ಹಾಗೂ 1,000 ಮುಖಬೆಲೆ ದುಬಾರಿ ನೋಟಿನ ಮೇಲೆ ನಿಷೇಧ ಕುರಿತಂತೆ ಕೇಂದ್ರ ವಿರುದ್ಧ ಪ್ರತಿಪಕ್ಷಗಳು ಕಿಡಿಕಾರುತ್ತಿರುವ ಬೆನ್ನಲ್ಲೇ ಯೋಗ ಗುರು ಬಾಬಾ ರಾಮ್ ದೇವ್...

ನವದೆಹಲಿ: ರು.500 ಹಾಗೂ 1,000 ಮುಖಬೆಲೆ ದುಬಾರಿ ನೋಟಿನ ಮೇಲೆ ನಿಷೇಧ ಕುರಿತಂತೆ ಕೇಂದ್ರ ವಿರುದ್ಧ ಪ್ರತಿಪಕ್ಷಗಳು ಕಿಡಿಕಾರುತ್ತಿರುವ ಬೆನ್ನಲ್ಲೇ ಯೋಗ ಗುರು ಬಾಬಾ ರಾಮ್ ದೇವ್ ಅವರು ಭಾನುವಾರ ಕೇಂದ್ರ ಸರ್ಕಾರಕ್ಕೆ ಬೆಂಬಲವನ್ನು ಸೂಚಿಸಿದ್ದಾರೆ.

ಕೇಂದ್ರ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ರಾಮ್ ದೇವ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಠಿಣ ನಿರ್ಧಾರದಿಂದ ಇಂದು ದೇಶದಲ್ಲಿರುವ ಕಪ್ಪುಹಣ, ಭ್ರಷ್ಟಾಚಾರ, ಭಯೋತ್ಪಾದನೆ, ನಕ್ಸಲರು ಮತ್ತು ಪ್ರಮುಖವಾಗಿ ಖೋಟಾನೋಟಿ ಮೇಲೆ ಪರಿಣಾಮ ಬೀರಿದೆ. ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆಯಾಗಿರಬಹುದು. ಆದರೆ, ಇದು ಉತ್ತಮ ಬೆಳವಣಿಗೆಗಾಗಿಯೇ. ಸಮಸ್ಯೆ ಬಗೆಹರಿಸಲು ಸರ್ಕಾರ ಪ್ರಯತ್ನಗಳನ್ನು ಮಾಡುತ್ತಿದೆ. ನಿರ್ಧಾರ ಉತ್ತಮವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಬಾರದು ಎಂದು ಹೇಳಿದ್ದಾರೆ.

ಯುದ್ಧ ಸಮಯದಲ್ಲಿ ನಮ್ಮ ಯೋಧರು 7-8 ದಿನಗಳ ಕಾಲ ಊಟ ನಿದ್ರೆ ಇಲ್ಲದೆಯೇ ಹೋರಾಡಿದ್ದಾರೆ. ದೇಶಕ್ಕಾಗಿ ನಾವು ಇಷ್ಟಾದರೂ ಕಷ್ಟವನ್ನು ಪಡಬಾರದೇ? ಕೆಲವು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ದೇಶಕ್ಕಿಂತಲೂ ದೊಡ್ಡದು ನಮಗೆ ಬೇರಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ