ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ದೇಶದ ರಕ್ಷಣೆಗಾಗಿ ಸಿಪಿಎಂ ಜೊತೆ ಕೆಲಸ ಮಾಡಲು ಸಿದ್ಧ: ಮಮತಾ ಬ್ಯಾನರ್ಜಿ

ದುಬಾರಿ ನೋಟಿನ ಮೇಲೆ ನಿಷೇಧ ಹೇರಿದ ಬಳಿಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿಯೇ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದ ರಕ್ಷಣೆಗಾಗಿ ಸಿಪಿಎಂ ಪಕ್ಷದೊಂದಿಗೆ ಕೆಲಸ ಮಾಡಲು ಸಿದ್ಧವಿದ್ದೇವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು...

ಕೋಲ್ಕತಾ: ದುಬಾರಿ ನೋಟಿನ ಮೇಲೆ ನಿಷೇಧ ಹೇರಿದ ಬಳಿಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿಯೇ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದ ರಕ್ಷಣೆಗಾಗಿ ಸಿಪಿಎಂ ಪಕ್ಷದೊಂದಿಗೆ ಕೆಲಸ ಮಾಡಲು ಸಿದ್ಧವಿದ್ದೇವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹೇಳಿದ್ದಾರೆ.

ಈ ಕುರಿತಂತೆ ಕೋಲ್ಕತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿಪಿಐ ಮತ್ತು ಸಿಪಿಎಂ ಪಕ್ಷಗಳ ಮಧ್ಯೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಆದರೆ, ದೇಶದ ರಕ್ಷಣೆಗಾಗಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷದೊಂದಿಗೆ ಕೆಲಸ ಮಾಡಲು ಸಿದ್ಧವಿದ್ದೇವೆಂದು ಹೇಳಿದ್ದಾರೆ. ಅಲ್ಲದೆ, ಮುಂಬರುವ ಚಳಿಗಾಲ ಅಧಿವೇಶನದ ವೇಳೆ ಪ್ರತಿಪಕ್ಷಗಳು ಒಗ್ಗೂಡಿ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕೆಂದು ತಿಳಿಸಿದ್ದಾರೆ.

ರು.500 ಹಾಗೂ 1,000 ಮುಖಬೆಲೆಯ ದುಬಾರಿ ಬೆಲೆಯ ನೋಟಿನ ಮೇಲೆ ನಿಷೇಧ ಹೇರುವುದಕ್ಕೂ 1 ಗಂಟೆಗೂ ಮುನ್ನ ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು 3 ಕೋಟಿ ಹಣವನ್ನು ಬ್ಯಾಂಕಿನಲ್ಲಿ ಹಾಕಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ಅಲ್ಲದೆ, ನೋಟು ನಿಷೇಧದ ಹಿಂದೆ ದೊಡ್ಡ ಹಗರಣವೇ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಇದೀಗ ಬಿಜೆಪಿ ವಿರುದ್ಧ ಹರಿಹಾಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video