ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ಕಣ್ಣೀರಿಡುವ ಮೂಲಕ ಜನರ ಮೂರ್ಖರಾಗಿಸಲು ಸಾಧ್ಯವಿಲ್ಲ: ಮತ್ತೆ ಪ್ರಧಾನಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ!

ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜೆಗಳನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ...

ನವದೆಹಲಿ: ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜೆಗಳನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೋಟಿಗಾಗಿ ಸಾಲುಗಟ್ಟಿ ನಿಂತ ಪ್ರಜೆಗಳನ್ನು ಅವರು  ಅವಮಾನಿಸಿದ್ದಾರೆ. ಹೀಗಾಗಿ ಕೂಡಲೇ ಅವರು ಕ್ಷಮೆಯಾಚಿಸ ಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ಕಪ್ಪುಹಣವನ್ನು ಬಿಳಿಯಾಗಿಸುವ ದೊಡ್ಡ ಕುತಂತ್ರವೇ ನೋಟುಗಳನ್ನು ನಿಷೇಧ ಯೋಜನೆ. ದೊಡ್ಡ ದೊಡ್ಡ ಉದ್ಯಮಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೋಟು  ನಿಷೇಧಿಸುವ ಯೋಜನೆ ರೂಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಗೋವಾ ಕಾರ್ಯಕ್ರಮದ ಕುರಿತು ಮಾತನಾಡಿದ ಕೇಜ್ರಿವಾಲ್, ಭಾವುಕರಾಗಿ ಮಾತನಾಡುವ ಮೂಲಕ  ದೇಶದ ಪ್ರಜೆಗಳನ್ನು ಪ್ರಧಾನಿ ಮೋದಿ ಮೂರ್ಖರನ್ನಾಗಿಸಲು ಯತ್ನಿಸಿದ್ದಾರೆ. ಅಲ್ಲದೆ ಬ್ಯಾಂಕುಗಳ ಮುಂದೆ ಸಾಲುಗಟ್ಟಿ ನಿಂತ ಪ್ರಜೆಗಳ ವಿರುದ್ಧ ಮಾತನಾಡುವ ಮೂಲಕ ಅವರಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಕೂಡಲೇ  ಅವರು ದೇಶದ ಪ್ರಜೆಗಳ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರಧಾನಿ ಮೋದಿ ಅವರ ಈ ಕ್ರಮದಿಂದಾಗಿ ದೇಶದ ಜನತೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರಧಾನಿ ಮೋದಿ ನಡೆಯಿಂದ ದೇಶದ ಅರ್ಥವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಯಾವುದೇ ಪೂರ್ವಭಾವಿ  ಸಿದ್ಧತೆಗಳಿಲ್ಲದೇ ಕೇಂದ್ರ ನಿರ್ಧಾರ ಕೈಗೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ತನ್ನ ಆದೇಶವನ್ನು ಹಿಂಪಡೆಯಬೇಕು. ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ ಪಡೆಯಲು ಇನ್ನೂ ಸಮಾಯವಕಾಶವಿದೆ ಎಂದು  ಕೇಜ್ರಿವಾಲ್ ಹೇಳಿದ್ದಾರೆ.

ಗೋವಾದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ್ದ ಪ್ರಧಾನಿ ಮೋದಿ ಭಾವಕರಾಗಿ ಮಾತನಾಡಿದ್ದರು. ಸರ್ಕಾರದ ಅಭಿವೃದ್ಧಿ ಕಾರ್ಯಗಳ ನಡುವೆಯೂ ಟೀಕೆಗಳು ಎದುರಾಗುತ್ತಿದ್ದು, ದೇಶಕ್ಕಾಗಿ ನಾನು  ಮನೆ ಮತ್ತು ಕುಟುಂಬಸ್ಥರನ್ನು ತೊರೆದಿದ್ದೇನೆ ಎಂದು ಹೇಳುತ್ತಾ ಗದ್ಗಧಿತರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!