ಸಂಸತ್ತು (ಸಂಗ್ರಹ ಚಿತ್ರ) 
ದೇಶ

ಸುಗಮ ಅಧಿವೇಶನಕ್ಕೆ ಸಿದ್ಧತೆ: ಸರ್ವಪಕ್ಷ ಸಭೆ ಕರೆದ ಲೋಕಸಭಾ ಸ್ಪೀಕರ್

ಇನ್ನು ಕೆಲವೇ ದಿನಗಳಲ್ಲಿ ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನ ಸುಗಮವಾಗಿ ಸಾಗಿಸುವ ಸಲುವಾಗಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸೋಮವಾರ ಸರ್ವಪಕ್ಷ...

ನವದೆಹಲಿ: ಇನ್ನು ಕೆಲವೇ ದಿನಗಳಲ್ಲಿ ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನ ಸುಗಮವಾಗಿ ಸಾಗಿಸುವ ಸಲುವಾಗಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸೋಮವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಂಡುವಂತೆ ಎಲ್ಲಾ ಪಕ್ಷದ ನಾಯಕರ ಬಳಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮನವಿ ಮಾಡಿಕೊಳ್ಳಲಿದ್ದಾರೆ.
 
ಕೇಂದ್ರ ಸರ್ಕಾರ ಕೂಡ ಸರ್ವಪಕ್ಷ ಸಭೆಯನ್ನು ಕರೆದಿದ್ದು, ಮಂಗಳವಾರ ಎಲ್ಲಾ ಪಕ್ಷದ ನಾಯಕರು ಅಧಿವೇಶನ ಕುರಿತಂತೆ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ರು.500 ಹಾಗೂ 1,000 ಮುಖಬೆಲೆಯ ದುಬಾರಿ ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರುತ್ತಿದ್ದು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿವೆ.

ಈ ಹಿಂದಷ್ಟೇ ನೋಟು ನಿಷೇಧ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಸಂಸತ್ತಿನಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ನೋಟು ನಿಷೇಧ ವಿಚಾರವನ್ನು ಪ್ರಸ್ತಾಪ ಮಾಡಲಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ