ಛತ್ತೀಸ್ ಗಡದಲ್ಲಿ ಗುಂಡಿನ ಚಕಮಕಿ: ಮಾವೋವಾದಿ ಮುಖಂಡನ ಹತ್ಯೆ
ನಕ್ಸಲರ ಮುಖಂಡ ಹಾಗೂ ಜಿಲ್ಲಾ ಶಸಸ್ತ್ರ ಮೀಸಲು ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರ ಮುಖಂಡ ...
ರಾಯಪುರ: ನಕ್ಸಲರ ಮುಖಂಡ ಹಾಗೂ ಜಿಲ್ಲಾ ಶಸಸ್ತ್ರ ಮೀಸಲು ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರ ಮುಖಂಡ ಸಾವನ್ನಪ್ಪಿದ್ದಾನೆ.
ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ಶಸ್ತ್ರ ಸಜ್ಜಿತ ನಕ್ಸಲರು ಸೆಕ್ಯೂರಿಟಿ ಪಡೆ ಇಂದು ಬೆಳಗ್ಗೆ ನಡೆದ ಗುಂಡಿನ ಕಾಳಗದಲ್ಲಿ ವಂಜಾಮ್ ನಂದಾ ಎಂಬಾತ ಸಾವನ್ನಪ್ಪಿದ್ದಾನೆ.
ನಂದಾ ಎಂಬಾತ ಸಾವನ್ನಪ್ಪಿದ ನಂತರ ಆತನ ಜೊತೆಯಿದ್ದ ಉಳಿದ ನಕ್ಸಲರು ಸ್ಥಳದಿಂದ ಪರಾರಿಯಾಗಿದ್ದಾರೆ. ಮೃತ ನಕ್ಸಲ್ ಕಮಾಂಡೋ ವಿರುದ್ಧ ವಿವಿಧ ಕೋರ್ಟ್ ಗಳಿಂದ 12 ವಾರಂಟ್ ಜಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.