ಸಂಗ್ರಹ ಚಿತ್ರ 
ದೇಶ

ಬಾರಾಮುಲ್ಲಾದಲ್ಲಿ ಯೋಧರು, ಉಗ್ರರ ನಡುವೆ ಗುಂಡಿನ ಕಾಳಗ: ಓರ್ವ ಪೇದೆ ಸಾವು

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ದಾಳಿ ವೇಳೆ ಓರ್ವ ಪೇದೆ ಮೃತಪಟ್ಟಿರುವುದಾಗಿ...

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ದಾಳಿ ವೇಳೆ ಓರ್ವ ಪೇದೆ ಮೃತಪಟ್ಟಿರುವುದಾಗಿ ಬುಧವಾರ ತಿಳಿದುಬಂದಿದೆ.

ಝಲೂರ್ ಪ್ರದೇಶದ ಸಪೋರ್ ಟೌನ್ ನಲ್ಲಿ ಉಗ್ರರ ಗುಂಪೊಂದು ಅಡಗಿ ಕುಳಿತಿದ್ದು, ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಭಾರತೀಯ ಸೇನಾ ಪಡೆ ಕಾರ್ಯಾಚರಣೆಗಿಳಿದಿತ್ತು. ಕಾರ್ಯಾಚರಣೆ ವೇಳೆ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

20 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣಾ ದಳ (ಎಸ್ಒಜಿ) ಹಾಗೂ ಭಾರತೀಯ ಸೇನಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು,  ಸಪೋರ್ ಟೌನ್ ಬಳಿ ಅಡಗಿ ಕುಳಿತಿರುವ ಉಗ್ರರು ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಗುಂಡಿನ ದಾಳಿಗೆ ಸ್ಥಳದಲ್ಲಿದ್ದ ಓರ್ವ ಪೇದೆಯೊಬ್ಬರು ಮೃತಪಟ್ಟಿದ್ದಾರೆ.

ಮೃತ ಪೇದೆಯನ್ನು ಮೊಹಮ್ಮದ್ ಶಫಿ ಎಂದು ಗುರ್ತಿಸಲಾಗಿದೆ. ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್