ಬ್ಯಾಂಕ್ ನಲ್ಲಿ ಸರತಿ ಸಾಲು, ಒಳ ಚಿತ್ರ ಮೃತ ಲಕ್ಷ್ಮೀ ನಾರಾಯಣ 
ದೇಶ

ಹಣ ಠೇವಣಿಗಾಗಿ ಬ್ಯಾಂಕ್ ಮುಂದೆ ಸರತಿ ಸಾಲಲ್ಲಿ ನಿಂತಿದ್ದ ಹಿರಿಯನಾಗರಿಕ ಸಾವು!

ನೋಟು ನಿಷೇಧದಿಂದಾಗಿ ತಮ್ಮ ಬಳಿ ಇರುವ ಹಳೆಯ ನೋಟುಗಳನ್ನು ಬ್ಯಾಂಕ್ ನಲ್ಲಿ ಠೇವಣಿ ಇಡಲು ಬಂದಿದ್ದ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಕುಸಿದು ಪ್ರಾಣ ಬಿಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಹೈದರಾಬಾದ್: ನೋಟು ನಿಷೇಧದಿಂದಾಗಿ ತಮ್ಮ ಬಳಿ ಇರುವ ಹಳೆಯ ನೋಟುಗಳನ್ನು ಬ್ಯಾಂಕ್ ನಲ್ಲಿ ಠೇವಣಿ ಇಡಲು ಬಂದಿದ್ದ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಕುಸಿದು ಪ್ರಾಣ ಬಿಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಮೂಲತಃ ಅನಂತಪುರ ಜಿಲ್ಲೆಯ ಪುಟ್ಟಪರ್ತಿ ಮೂಲದವರಾದ 78 ವರ್ಷದ ನಿವೃತ್ತ ಸರ್ಕಾರಿ ಉದ್ಯೋಗಿ ಲಕ್ಷ್ಮೀ ನಾರಾಯಣ ಎಂಬುವವರು ಸಾವನ್ನಪ್ಪಿದ್ದು, ಲಕ್ಷ್ಮೀ ನಾರಾಯಣ ಅವರು ಮಂಗಳವಾರ ಮಾರೇಡ್ ಪಲ್ಲಿಯಲ್ಲಿರುವ  ಬ್ಯಾಂಕಿಗೆ ತಮ್ಮ ಬಳಿ ಇದ್ದ ಸುಮಾರು 75 ಸಾವಿರ ರು. ಹಳೆಯ ನೋಟುಗಳನ್ನು ಬ್ಯಾಂಕಿನಲ್ಲಿ ಠೇವಣಿ ಇಡಲು ಆಗಮಿಸಿದ್ದರು. ಈ ವೇಳೆ ಸುಮಾರು 8 ಗಂಟೆಗಳ ಕಾಲ ಸರತಿ ಸಾಲಲ್ಲಿ ನಿಂತಿದ್ದ ಲಕ್ಷ್ಮೀ ನಾರಾಯಣ ಅವರು  ಅತಿಯಾದ ಬಳಲಿಕೆ ಹಾಗೂ ಆಯಾಸದಿಂದ ಸ್ಥಳದಲ್ಲೇ ಕುಸಿದಿದ್ದಾರೆ. ಆಗ ಅವರ ತಲೆಗೆ ಪೆಟ್ಟಾಗಿದ್ದು, ಕೂಡಲೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ಸಮೀಪದ ಆಸ್ಪತ್ರೆಗೆ ಸೇರಿಸಿದ್ದಾರೆ.

ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣ ಹೋಗಿತ್ತು ಎಂದು ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಅವರ ಪಾರ್ಥೀವ ಶರೀರವನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೋಟು ನಿಷೇಧದ ಬಳಿಕ ಅದರ ಪರಿಣಾಮಕ್ಕೆ ನೇರವಾಗಿ ಮತ್ತು ಪರೋಕ್ಷವಾಗಿ ಸಂಬಂಧಿಸಿದಂತೆ ಉಂಟಾದ ವಿವಿಧ ಘಟನೆಗಳಲ್ಲಿ ಈ ವರೆಗೂ ದೇಶಾದ್ಯಂತ 16 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ ಓರ್ವ ಮಹಿಳೆ  ತಾನು ಜಮೀನು ಮಾರಿದ್ದ ಸುಮಾರು 15 ಲಕ್ಷ ಹಣ ಇನ್ನು ಚಲಾವಣೆಯಾಗುವುದಿಲ್ಲ ಎಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ನೆನಪಿಸಿಕೊಳ್ಳಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್