ದೇಶ

ಮ್ಯಾಜಿಸ್ಟ್ರೇಟ್ ಗೆ ನಿಂದನೆ, ಪ.ಬಂಗಾಳ ಕಾಂಗ್ರೆಸ್ ಮುಖ್ಯಸ್ಥನ ವಿರುದ್ಧ ಎಫ್ಐಆರ್ ದಾಖಲು

Lingaraj Badiger
ಬೆಹ್ರಾಪೋರ್: ಸಾರ್ವಜನಿಕವಾಗಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ನಿಂದಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧಿರ್ ಚೌಧರಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 14ರಂದು ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವೈ ರತನಕರ್ ರಾವ್ ಅವರನ್ನು ನಿಂದಿಸಿದ ಆರೋಪದ ಮೇಲೆ ಚೌಧರಿ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಬೆಹ್ರಾಪೋರ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾವ್ ಅವರು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಗೆ ಹತ್ತಿರವಾಗಿದ್ದು, ಜಿಲ್ಲಾ ಪರಿಷತ್ ನಲ್ಲಿ ಕಾಂಗ್ರೆಸೇತರ ಸದಸ್ಯರಿಗೆ ಸಹಕರಿಸುತ್ತಿದ್ದಾರೆ ಎಂದು ಚೌಧರಿ ಆರೋಪಿಸಿದ್ದರು.
SCROLL FOR NEXT