ದೇಶ

ನಾಳೆ ನೋಟ್ ನಿಷೇಧದ ವಿರುದ್ಧ ಬಹಿರಂಗ ಸಮಾವೇಶ, ಕೇಜ್ರಿವಾಲ್ ಗೆ ಮಮತಾ ಸಾಥ್

Lingaraj Badiger
ನವದೆಹಲಿ: 500 ಹಾಗೂ 1000 ನೋಟ್ ನಿಷೇಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಸಮರ ಸಾರಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಸಂಬಂಧ ಗುರುವಾರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನೋಟ್ ನಿಷೇಧ ವಿರುದ್ಧ ಇಂದು ರಾಷ್ಟ್ರಪತಿ ಭವನದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಸಹ ಮಂಡಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಆಜಾದಪುರ ಮಂಡಿಯಲ್ಲಿ ನಾನು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತೇನೆ. ಮಮತಾ ಬ್ಯಾನರ್ಜಿ ಅವರು ಸಹ ಮಾತನಾಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಆಪ್ ನಾಯಕ, ನೀವು ದೇಶಕ್ಕೆ ಮೊಸ ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
SCROLL FOR NEXT