ಮಾಯಾವತಿ (ಸಂಗ್ರಹ ಚಿತ್ರ) 
ದೇಶ

ಪ್ರಧಾನಿ ಸದನಕ್ಕೆ ಬರುವವರೆಗೂ ನೋಟುಗಳ ರದ್ದತಿ ಬಗ್ಗೆ ಚರ್ಚೆಗೆ ಅವಕಾಶ ನೀಡಲ್ಲ: ಮಾಯಾವತಿ

ಪ್ರಧಾನಿ ನರೇಂದ್ರ ಮೋದಿ ಸದನಕ್ಕೆ ಹಾಜರಾಗುವವರೆಗೂ ನೋಟು ರದ್ದತಿ ವಿಷಯದ ಬಗ್ಗೆ ಸಂಸತ್ ನಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ...

ನವದೆಹಲಿ: 500, 1000 ರೂ  ನೋಟುಗಳ ರದ್ದತಿಯ ಪರಿಣಾಮದ ಬಗ್ಗೆ ಕೇಂದ್ರ ಸರ್ಕಾರ ಊದಾಸೀನತೆ ತೋರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸದನಕ್ಕೆ ಹಾಜರಾಗುವವರೆಗೂ ನೋಟು ರದ್ದತಿ ವಿಷಯದ ಬಗ್ಗೆ ಸಂಸತ್ ನಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಎಚ್ಚರಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಸದನಕ್ಕೆ ಹಾಜರಾಗುವವರೆಗೂ ಚರ್ಚೆಗೆ ಅವಕಾಶ ನೀಡಬಾರದು ಎಂಬ ತೀರ್ಮಾವನ್ನು ಪ್ರತಿಪಕ್ಷಗಳು ತೆಗೆದುಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ ಘೋಷಣೆಯಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗಿರುವುದರ ಬಗ್ಗೆ ಗಂಭೀರವಾಗಿ ಯೋಚಿಸುವುದೇ ಆದರೆ ಅವರು ಸದನಕ್ಕೆ ಬಂದು ಮಾತನಾಡಲಿ ಎಂದು ಮಾಯಾವತಿ ಆಗ್ರಹಿಸಿದ್ದಾರೆ. 
ಜನಸಾಮಾನ್ಯರು ಅನುಭವಿಸುತ್ತಿರುವ ಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಜನಸಾಮಾನ್ಯವರ ನೋವು ಇವರಿಗೆ ಅರ್ಥವಾಗುತ್ತಿಲ್ಲ ಎಂದು ಮಾಯಾವತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಸದನಕ್ಕೆ ಬಂದ ನಂತರವೇ ನೋಟು ನಿಷೇಧದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂಬ ಬಿಎಸ್ ಪಿ ನಿರ್ಣಯವನ್ನು ಬಹುತೇಕ ಪ್ರತಿಪಕ್ಷಗಳು ಸ್ವಾಗತಿಸಿವೆ ಎಂದು ಮಾಯಾವತಿ ಇದೇ ವೇಳೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್