ದೇಶ

ಉಲ್ಫಾ ಉಗ್ರರಿಂದ ಭಾರತೀಯ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ: 3 ಯೋಧರು ಹುತಾತ್ಮ

Vishwanath S
ಅಸ್ಸಾಂ: ಅಸ್ಸಾಂನ ತಿನ್ಸುಕಿಯಾ ನಲ್ಲಿ ಶಂಕಿತ ಉಲ್ಫಾ ಉಗ್ರರು ಭಾರತೀಯ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ್ದು ಪರಿಣಾಮ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. 
ತಿನ್ಸುಕಿಯಾದ ಪೆಂಗ್ರಿ ಅರಣ್ಯದಲ್ಲಿ ಭಾರತೀಯ ಸೇನೆ ಬೆಳಗ್ಗೆ 5.30ರ ಸುಮಾರಿಗೆ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಯೋಧರ ವಿರುದ್ಧ ಶಂಕಿತ ಉಲ್ಫಾ ಉಗ್ರರು ಬಾಂಬ್ ದಾಳಿ ನಡೆಸಿದ್ದು ಮೂವರು ಯೋಧರು ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ. 
ಸದ್ಯ ಉಗ್ರರ ಹಾಗೂ ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ನಡೆಸಿದೆ. ಬಾಂಬ್ ದಾಳಿಯಲ್ಲಿ ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
SCROLL FOR NEXT