ಮೊಬೈಲ್ ಇಂಟರ್ ನೆಟ್ ಸೇವೆ ಪುನಾರಂಭ
ಶ್ರೀನಗರ: ಕಾಶ್ಮೀರದಲ್ಲಿ ಸತತ ನಾಲ್ಕು ತಿಂಗಳಿನಿಂದ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ ನೆಟ್ ಸೇವೆಗಳು ನ.19ರಿಂದ ಪುನಾರಂಭಗೊಂಡಿವೆ.
ಎಲ್ಲಾ ಪೋಸ್ಟ್ ಪೇಯ್ಡ್ ಮೊಬೈಲ್ ಗಳಲ್ಲಿ ಇಂಟರ್ ನೆಟ್ ಸೇವೆಯನ್ನು ನ.18 ರ ಮಧ್ಯರಾತ್ರಿಯಿಂದ ಪ್ರಾರಂಭಿಸಲಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸಿದ ನಂತರ ಪ್ರೀಪೇಯ್ಡ್ ಮೊಬೈಲ್ ಗಳಲ್ಲೂ ಇಂಟರ್ ನೆಟ್ ಸೇವೆಗಳನ್ನು ಒದಗಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ವನಿ ಹತ್ಯೆಯನ್ನು ವಿರೋಧಿಸಿ ಜು.9ರಿಂದ ಪ್ರಾರಂಭವಾದ ಪ್ರತಿಭಟನೆ ಕಾಶ್ಮೀರದ ವಾತಾವರಣವನ್ನು ಕದಡಿತ್ತು. ಪ್ರತ್ಯೇಕತಾವಾದಿಗಳು ಹಾಗೂ ಉಗ್ರರ ಬೆಂಬಲಿಗರ ಪ್ರತಿಭಟನೆಯನ್ನು ನಿಯಂತ್ರಿಸಲು ಜು.9ರಿಂದ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.