ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ಕೆ ಸೂರ್ಯನಾರಾಯಣ್ ರಾವ್ ಅವರು ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಆರ್ಎಸ್ಎಸ್ ನಲ್ಲಿ ಸೂರೂಜಿ ಎಂದೇ ಖ್ಯಾತರಾಗಿದ್ದ ಸೂರ್ಯನಾರಾಣನ್ ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲವು ವಾರಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸೂರ್ಯನಾರಾಯಣ್ ಅವರು ಕಳೆದ 70 ವರ್ಷಗಳಿಂದಲೂ ಸಂಘದ ಪ್ರಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕದಲ್ಲಿ ಸಂಘವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಚ್.ವಿ ಶೇಷಾದ್ರಿ ಹಾಗೂ ಚಂಪಾಕಾಂತ್ ಅವರೊಂದಿಗೆ ಕೈಜೋಡಿಸಿ ರಾಜ್ಯದಲ್ಲಿ ಆರ್ಎಸ್ಎಸ್ ಸಂಘ ಕಟ್ಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics