ಉತ್ತರ ಪ್ರದೇಶ ರೈಲು ದುರಂತ: ಸಂತಾಪ ಸೂಚಿಸಿದ ಬಿಹಾರ ಮುಖ್ಯಮಂತ್ರಿ
ಉತ್ತರ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆಂದು...
ಪಾಟ್ನ: ಉತ್ತರ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ನಿತೀಶ್ ಕುಮಾರ್ ಅವರ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯದಾದ್ಯಂತ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಆದರೆ, ಉತ್ತರ ಪ್ರದೇಶದಲ್ಲಿ ರೈಲು ದುರಂತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿರುವ ನಿತೀಶ್ ಕುಮಾರ್ ಅವರು ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್ ಅವರು, ರೈಲು ದುರಂತ ನಿಜಕ್ಕೂ ಆಘಾತವನ್ನುಂಟು ಮಾಡಿತು. ಮೃತರ ಕುಟುಂಬಗಳಿಗೆ ಈ ಮೂಲಕ ಸಂತಾಪವನ್ನು ಸೂಚಿಸುತ್ತಿದ್ದೇನೆ. ಮೃತರ ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.