ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತದ ಬಗ್ಗೆ ಪ್ರಧಾನ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಅಪಘಾತದಲ್ಲಿ ಹಲವರು ಪ್ರಯಾಣಿಕರು ಮೃತಪಟ್ಟಿದ್ದು ಮೃತರ ಕುಟಂಬ ಸದಸ್ಯರಿಗೆ ದುಃಖ ಬರಿಸುವ ಶಕ್ತಿ ಆ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ದುರಂತ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದು ಖುದ್ದು ಕಾರ್ಯೋನ್ಮುಕರಾಗುವಂತೆ ಸೂಚಿಸಿರುವುದಾಗಿ ಪ್ರಧಾನಿ ಹೇಳಿದ್ದಾರೆ.