ನವದೆಹಲಿ: ಸುದ್ದಿವಾಹಿನಿಗೆ ನೀಡಿದ್ದ ಸಂದರ್ಶನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಪ್ರತಿಕ್ರಿಯೆ ನೀಡಿದ್ದು, ನಿಜವಾಗಿಯೂ ಇಬ್ಬರು ನಾಯಕರನ್ನು ಹೋಲಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಇಂದಿರಾ ಗಾಂಧಿ ಹಾಗೂ ನರೇಂದ್ರ ಮೋದಿ ಅವರನ್ನು ಹೋಲಿಸಲು ಸಾಧ್ಯವಿಲ್ಲ ಏಕೆಂದರೆ ಮೋದಿ ಅಂದ್ರೆ ಮೇಕರ್ ಆಫ್ ಡೆವಲಪ್ಡ್ ಇಂಡಿಯಾ(MODI) ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. : ತುರ್ತು ಪರಿಸ್ಥಿತಿ ವೇಳೆ ಏನಾಗಿತ್ತು ಎಂಬುದನ್ನು ಜನರು ಮರೆಯುವಂತಿಲ್ಲ. ಜನರು ಸಾಧ್ಯವಾದಷ್ಟೂ ಅಧಿಕಾರಕ್ಕೆ ಅಂಟಿಕೊಳ್ಳಲು ಯತ್ನಿಸಿದರು ಆದರೆ ನೆಲದ ಕಾನೂನು ಇದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಇಂದಿರಾ ಗಾಂಧಿ ಅವರನ್ನು ಹೋಲಿಕೆ ಮಾಡುವ ಬಗ್ಗೆ ಕೇಳಿದ ಪ್ರಶ್ನೆಗೆ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದ ಸೋನಿಯಾ ಗಾಂಧಿ, ಮೋದಿ- ಇಂದಿರಾ ಗಾಂಧಿ ಅವರನ್ನು ಹೋಲಿಸುವುದರಿಂದ ತಮಗೆ ಕಿರಿಕಿರಿಯಾಗುವುದಿಲ್ಲ, ಏಕೆಂದರೆ ಇಬ್ಬರೂ ನಾಯಕರನ್ನು ಹೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics